“ಇನಾಮ್ದಾರ್ ” ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ.
ನಿರಂಜನ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಉದ್ಯಮಿ ಕರುಣಾಕರ್ ರೆಡ್ಡಿ, ಎಂ.ಕೆ.ಮಠ ಮತ್ತಿತತರು ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ “ಇನಾಮ್ದಾರ್” ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ ಸಂಘರ್ಷದ ಕಥೆಯನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ ಎಂದರು ನಿರ್ದೇಶಕ ಸಂದೇಶ್ ಶೆಟ್ಟಿ.
ಬೆಳಗಾವಿ, ಕುಂದಾಪುರ, ಚಾಮರಾಜನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ. ಇದೇ 27 ರಂದು ಚಿತ್ರ ತೆರೆಗೆ ಬರಲಿದೆ ಎಂದರು. ನಾಯಕ ರಂಜನ್ ಛತ್ರಪತಿ ಮಾತನಾಡಿ , ಕಷ್ಟಕಾಲದಲ್ಲಿ ನಿರಂಜನ್ ಶೆಟ್ಟಿ ತಲ್ಲೂರು ಬಂದು ಚಿತ್ರ ಪೂರ್ಣಗೊಳಿಸಿದ್ದಾರೆ. “ಇನಾಮ್ದಾರ್” ಕುಟುಂಬದ ಮಗನಾಗಿ ಕಾಣಿಸಿಕೊಂಡಿದ್ದೇನೆ ಎಂದರೆ ನಿರ್ಮಾಪಕ ನಿರಂಜನ್ ಶೆಟ್ಟಿ ಚಿತ್ರರಂ ಹೊಸದು ಎಂದು ಮಾಹಿತಿ ಹಂಚಿಕೊಂಡರು.
ನಾಯಕಿ ಚಿರಶ್ರೀ ಅಂಚಿನ್ ಚಿತ್ರದಲ್ಲಿ ಬರುವ ಕಪ್ಪು ಸುಂದರಿ ನಾನೇ ಎಂದರೆ ಎಂ.ಕೆ.ಮಠ, ರಘು ಪಾಂಡೇಶ್ವರ, ಛಾಯಾಗ್ರಾಹಕ ಮುರಳಿ, ಸಂಕಲನಕಾರ ಶಿವರಾಜ್ ಮೇಹು ಸೇರಿದಂತೆ ಮತ್ತಿತರರು ಮಾಹಿತಿ ಹಂಚಿಕೊಂಡರು. ರಾಕಿ ಸೋನು ಹಾಗೂ ನಕುಲ್ ಅಭಯಂಕರ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.