ಪಂಚಮಸಾಲಿ ಮಠ- ಕನಕಗುರುಪೀಠಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ದಾವಣಗೆರೆ.ಜ.೬: ಬಿಜೆಪಿಯ ರಾಷ್ಟ್ರ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡ ಅವರು ದಾವಣಗೆರೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿರುವ ಶ್ರೀ ಕನಕ ಗುರು ಪೀಠದ ನಿರಂಜನಾನಂದ ಪುರಿ ಶ್ರೀಗಳು ಹಾಗೂ ಶ್ರೀ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಶ್ರೀಗಳನ್ನು ಭೇಟಿ ಮಾಡಿ  ಶ್ರೀಗಳ ಆಶೀರ್ವಾದ ಪಡೆದರು. ಹರಿಹರ ತಾಲೂಕಿನಲ್ಲಿರುವ ಕುರುಬ ಹಾಗೂ ಪಂಚಮಸಾಲಿ ಸಮುದಾಯದ ಮೂರು ಪೀಠಗಳಿಗೆ ರಾಷ್ಟ್ರ ಅಧ್ಯಕ್ಷ ಜೆ ಪಿ ನಡ್ದ ಅವರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದು, ಮುಂಬರುವ ದಿನಗಳಲ್ಲಿ ಎದುರಾಗಲಿರುವ ಚುನಾವಣೆಗೆ ಈ ಮೂರು ಸಮುದಾಯಗಳ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಮತ ಯಾತ್ರೆ ನಡೆಸಲಾಗುತ್ತಿದೆ. ಗುರುವಾರದಿಂದಲೂ ರಾಜ್ಯಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಅಧ್ಯಕ್ಷರು ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಠಾಧೀಶರು ಗಳನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದು ಇಂದು ದಾವಣಗೆರೆಗೆ ಆಗಮಿಸಿದ್ದಾರೆ. ಜೆಪಿ ನಡ್ದ ಅವರೊಂದಿಗೆ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ, ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ ಸೇರಿದಂತೆ ಎಲ್ಲಾ ಬಿಜೆಪಿ ಶಾಸಕರು ಇದ್ದರು.ಈ ವೇಳೆ ಸಮುದಾಯದ ಮಠಾಧೀಶರೊಂದಿಗೆ ಚರ್ಚೆ ನಡೆಸಿದ ನಡ್ಡಾ ಅವರು, ಸರ್ಕಾರ ಎಲ್ಲಾ ಹಂತದಲ್ಲೂ ನಿಮ್ಮ ಸಮುದಾಯಗಳ ಜೊತೆ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.ಮುಂಬರುವ 2023ರ ಚುನಾವಣೆಯಲ್ಲಿ ಎಲ್ಲಾ ಸಮುದಾಯಗಳ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಚುನಾವಣಾ ತಂತ್ರಗಾರಿಕೆಯನ್ನು ನಡೆಸುತ್ತಿದ್ದು, ರಾಜ್ಯದಂತ ಪ್ರವಾಸ ನಡೆಸುತ್ತಿದೆ. ಅದರಂತೆ ದಾವಣಗೆರೆ ಜಿಲ್ಲೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದ ಅವರು ಭೇಟಿ ನೀಡಿದ್ದು, ಮಠದ ಭೇಟಿಗಳ ನಂತರ ದಾವಣಗೆರೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ತ್ರಿಶೂಲ ಕಲಾಭವನದಲ್ಲಿ ಆಯೋಜಿಸಲಾಗಿರುವ ವೃತ್ತಿಪರ ಪ್ರಭಾವಿ ಮತದಾರರ ಸಮಾವೇಶದಲ್ಲಿ ಪಾಲ್ಗೊಂಡು ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.ಈ ವೇಳೆ ಜಿಲ್ಲಾಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಂಸದ ಜಿ.ಎಂ ಸಿದ್ದೇಶ್ವರ ಹಾಗೂ ಜಿಲ್ಲೆಯ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು