ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಜೂ 9 :- ಎಸ್ಎಸ್ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅಯೋಜಿಸುವ ಸಲುವಾಗಿ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ವೀರಶೈವ ಪಂಚಮಸಾಲಿ ಲಿಂಗಾಯತ ಸಮಾಜದ ಕೂಡ್ಲಿಗಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್ ಗೌಡ್ರು ತಿಳಿಸಿದ್ದಾರೆ.
ಭಾನುವಾರ(ಜೂ11)ರಂದು ಮಧ್ಯಾಹ್ನ 3 ಗಂಟೆಗೆ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಎಚ್.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಅಯೋಜಿಸಲಾಗಿದೆ. ಸಮಾಜದ ಬಂಧುಗಳು ಸಭೆಯಲ್ಲಿ ಭಾಗವಹಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿನಾಂಕ ಹಾಗೂ ಕಾರ್ಯಕ್ರಮದ ರೂಪರೇಷಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ತಾಲೂಕು ಘಟಕದ ಅಧ್ಯಕ್ಷ ರೇವಣ್ಣ.ಎಚ್.ಹಾಗೂ ಪ್ರತಿನಿಧಿಗಳು ಸಮುದಾಯದ ಹಿರಿಯ ಮುಖಂಡರು ಭಾಗವಹಿಸುತ್ತಿದ್ದೂ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ತಿಳಿಸಿದ್ದಾರೆ.