ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರದಿದ್ದರೆ ಮತ್ತೆ ಚಳವಳಿ

ಕಲಬುರಗಿ:ಎ.4: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಆರು ತಿಂಗಳ ಸಮಯಾವಕಾಶ ಪಡೆದಿರುವ ಸರ್ಕಾರ, ನಂತರವೂ ನಮ್ಮ ಬೇಡಿಕೆ ಈಡೇರಿಸದೇ ಹೋದರೆ ಚಳವಳಿ ಇನ್ನಷ್ಟು ಶಕ್ತಿಯುತವಾಗಿ ರೂಪುಗೊಳ್ಳಲಿದೆ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ನಡೆಸಿದ ಪಾದಯಾತ್ರೆಗೆ ಸಹಕರಿಸಿದ ಶರಣರಿಗೆ ಕೃತಜ್ಞತೆ ಸಲ್ಲಿಸಲು ಶರಣು ಶರಣಾರ್ಥ ಕೃತಜ್ಞತಾ ಯಾತ್ರೆ ಕೈಗೊಳ್ಳಲಾಗಿದೆ ಎಂದು ಹೇಳಿದರು.ಧಾರ್ಮಿಕ, ದಾಸೋಹದ ಮೂಲಕ ಲಿಂಗಾಯತ ಸಮಾಜ ಶ್ರೀಮಂತವಾಗಿದೆ. ಆದರೆ ಶೈಕ್ಷಣಿಕವಾಗಿ, ಐದ್ಯೋಗಿಕವಾಗಿ ಸಮಾಜ ಹಿಂದುಳಿದಿದೆ. ಅಖಂಡ ಲಿಂಗಾಯತರ ಶ್ರೇಯಸ್ಸಿಗಾಗಿ ಬೆಂಗಳೂರಿನಲ್ಲಿ ದೊಡ್ಡ ಸಮಾವೇಶದ ‌ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗಿತ್ತು. ಆದರೂ ಬೇಡಿಕೆ ಈಡೇರಿರಲಿಲ್ಲ.ನಂತರ 20 ದಿನಗಳ ಕಾಲ ಧರಣಿ ಸತ್ಯಾಗ್ರಹ ಮಾಡಲಾಯಿತು.
ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಧಾನಸೌಧದಲ್ಲಿ ಸುದೀರ್ಘ ಹೋರಾಟ ಮಾಡಿದ್ದರು.
ಇದಾದ ಬಳಿಕ ಮುಖ್ಯಮಂತ್ರಿಗಳು 6 ತಿಂಗಳಲ್ಲಿ ತಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಲಾಗಿದೆ. ಮುಂದಿನ ದಿನಗಳಲ್ಲೂ ಸಹ ಭರವಸೆ ಈಡೇರದೇ ಹೋದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುತ್ತೇವೆ ಎಂದು ಶ್ರೀಗಳು ಹೇಳಿದರು.
ಹೋರಾಟಕ್ಕೆ ಬೆಂಬಲಿಸಿದ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜನತೆಗೆ ಶರಣು ಶರಣಾರ್ತಿ ಜಾಥಾ ಮೂಲಕ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ.
ಮುಂದೆ ಅಫಜಲಪುರ, ಆಳಂದ, ಕಲಬುರಗಿ, ಬಸವಕಲ್ಯಾಣಕ್ಕೂ ತೆರಳಲಿದ್ದೇನೆ ಎಂದರು.
ಕಲಬುರಗಿಯಲ್ಲಿ ದೀಕ್ಷ, ಪಂಚಮಸಾಲಿ ಸಮುದಾಯದವರ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗುತ್ತಿದೆ. ಈ ವೇಳೆ ದರು.ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಾಜಕುಮಾರ ಪಾಟೀಲ ತೇಲ್ಕೂರ ಸಹ ಇರಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.