ಪಂಚಮ ಸಾಲಿ ಮೀಸಲಾತಿಗಾಗಿ ಯರಡೊಣಿ ರಸ್ತೆ ಮದ್ಯೆ ಇಷ್ಟ ಲಿಂಗ ಪೂಜೆ

ಲಿಂಗಸುಗೂರು,ಡಿ.೨೪-
ಲಿಂಗಸುಗೂರು ತಾಲ್ಲೂಕಿನ ಬೀದರ್ ಶ್ರೀರಂಗ ಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಚಮ ಸಾಲಿ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ ಹಟ್ಟಿ ಯರೋಡೊಣ ರಸ್ತೆ ಮದ್ಯೆ ಇಷ್ಟ ಲಿಂಗ ಪೂಜೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ .
ರಾಜ್ಯ ಸರ್ಕಾರ ಪಂಚಮ ಸಾಲಿ ಮೀಸಲಾತಿಯನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಆದರೆ ರಾಜ್ಯ ಸರ್ಕಾರ ಸಂವಿಧಾನದ ಅಡಿಯಲ್ಲಿ ಬರುವ ಪ್ರತಿಯೊಬ್ಬ ಪ್ರಜೆಯೂ ಕಾನೂನಿನ ಪ್ರಕಾರ ಮೀಸಲಾತಿ ಸೌಲಭ್ಯ ಕೊಡಲು ಸಂವಿಧಾನ ಪೀಠಿಕೆ ಯಲ್ಲಿರುವ ನಮಗೆ ಟೂ ಎ ಮೀಸಲಾತಿ ಜಾರಿಗೆ ಸರಕಾರ ಮೀನಾಮೇಷ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಿ ಇಂದು ರಾಯಚೂರು ಜಿಲ್ಲೆಯಲ್ಲಿ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯುಂಜಯ ಸ್ವಾಮೀಜಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಪಂಚಮಸಾಲಿ ಜನರಿಗೆ ಮೀಸಲಾತಿ ಜಾರಿಗೆ ತರದಿದ್ದರೆ ಮುಂದಿನ ದಿನಗಳಲ್ಲಿ ಭಾರಿ ಚಳುವಳಿ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇಂದು ಯರಡೊಣಿ ಗ್ರಾಮದಲ್ಲಿ ಹಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಚಮ ಸಾಲಿ ಸಾವಿರಾರು ಜನಾಂಗದವರು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಛೀಮಾರಿ ಹಾಕಿದ ಪ್ರಸಂಗ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಪರಿಣಾಮವಾಗಿ ವಾಹನ ಸವಾರರು ಹಾಗೂ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ತೊಂದರೆ ಯಾಗಿದ್ದು ಬಸ್ ಗಳು ಘಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ ಒಂದರಿಂದ ಒಂದೂವರೆ ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ .
ಎತ್ತು ಬಂಡಿಯ ಮೂಲಕ ಪಂಚಮಸಾಲಿ ಸಮಾಜದ ನಾಯಕರು ಒಗ್ಗಟ್ಟು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಮಹಿಳೆಯರು ಕುಂಭಮೇಳ ಹೊತ್ತು ಮೆರವಣಿಗೆ ನಡೆಸಿ ರಸ್ತಾ ರೊಖ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.