ಪಂಚರತ್ನ ಯೋಜನೆ ಸಮರ್ಪಕ ಜಾರಿಗೆ ಜೆಡಿಎಸ್ ಬೆಂಬಲಿಸಲು ಕರೆ

ದಾವಣಗೆರೆ.ಏ.೨೫; ಪಂಚರತ್ನ ಯೋಜನೆ ಸರ್ವ ಜನರ ಹಿತ ಕಾಪಾಡುವುದಾಗಿದೆ ಅದಕ್ಕಾಗಿ ಜನರು ಈ ಬಾರಿ‌ ಜೆಡಿಎಸ್ ಪಕ್ಷ ಬೆಂಬಲಿಸಬೇಕೆಂದು ಹರಿಹರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್.ಎಸ್ ಶಿವಶಂಕರ್ ಹೇಳಿದರು.ತಮ್ಮ ನಿವಾಸದಲ್ಲಿ ಕರೆದಿದ್ದ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಮಾಯಕೊಂಡ ಕ್ಷೇತ್ರದ ಅಭ್ಯರ್ಥಿ ಹೆಚ್.ಆನಂದಪ್ಪ ಜನಾನುರಾಗಿಯಾಗಿದ್ದಾರೆ‌ ಜನರು ಈ ಬಾರಿ ಜೆಡಿಎಸ್ ಪಕ್ಷ ಬೆಂಬಲಿಸಬೇಕು ಹಾಗೂ‌ ಕಾರ್ಯಕರ್ತರು ಮಾಜಿ‌ಪ್ರಧಾನಿ ದೇವೇಗೌಡರು ಹಾಗೂ ಮಾಜಿ‌ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ ಹೇಳಬೇಕು ಎಂದರು.ಈ ಸಂದರ್ಭದಲ್ಲಿ ಮಾಯಕೊಂಡ ಜೆಡಿಎಸ್ ಅಭ್ಯರ್ಥಿ ಹೆಚ್ ಆನಂದಪ್ಪ, ಹಾಗೂ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಗಣೇಶ್ ದಾಸ ಕರಿಯಪ್ಪ ನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರೊಂದಿಗೆ ಸುಧೀರ್ಘ ಚರ್ಚೆ ನಡೆಸಲಾಯಿತು.