ಪಂಚವಟಿ ವನಮಹೋತ್ಸವ ಕಾರ್ಯಕ್ರಮ

ಗದಗ,ಜೂ11: ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಪಂಚವಟಿ ವನಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಆವರಣದಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಪಂಚವಟಿ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಮಾತನಾಡಿ ಪ್ರತಿಯೊಬ್ಬರೂ ಮನೆಯ ಅಂಗಳದಲ್ಲಿ ಸಸಿ ನೆಟ್ಟು ಸಂರಕ್ಷಿಸಬೇಕು. ಈ ದಿಸೆಯಲ್ಲಿ ಗಿಡಮರ ಉಳಿಸಿ ಪರಿಸರ ಸಂರಕ್ಷಣೆ ಮಾಡಬೇಕು. ಗಿಡಮರಗಳನ್ನು , ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ಎಸ್. ಉಪ್ಪಿನ ಅವರು ಮಾತನಾಡಿ ಪ್ರತಿಯೊಬ್ಬರೂ ಆರೋಗ್ಯಪೂರ್ಣ ಜೀವನ ನಡೆಸಲು ಗಿಡ ಮರಗಳನ್ನು ಬೆಳೆಸೋಣ ಎಂದರು.

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ ಗೌರವ ಅಧ್ಯಕ್ಷರಾದ ಡಾ.ಎಸ್.ಆರ್.ಹಿರೇಮಠ ಅವರು ಮಾತನಾಡಿ ಪಂಚವಟಿಯ ಪೌರಾಣಿಕ ಹಿನ್ನೆಲೆ ಔಷಧ ಮರಗಳಾಗಿವೆ ಎಂದರು. ಡಾ.ಶಿವಶಂಕರ ಪೂಜಾರ ಅವರು ಮಾತನಾಡಿ ಬೇಸಿಗೆಯಲ್ಲಿ ಕೂಲರ್ ಗೆ ಹಾಕಿದಷ್ಟು ನೀರು ಗಿಡಕ್ಕೆ ಹಾಕಿದರೆ ವಾತಾವರಣೆ ಇಷ್ಟೊಂದು ಬಿಸಿಯಾಗುತ್ತಿರಲಿಲ್ಲ. ಇನ್ನಾದರೂ ಗಿಡಮರಗಳನ್ನು ಬೆಳೆಸೋಣ ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಡಾ.ವೆಂಕಟೇಶ ಪೂಜಾರ, ಡಾ. ಪಲ್ಲೇದ, ಡಾ.ದೊಡ್ಡಮನಿ, ಡಾ.ರವಿ ಮೂಲಿಮನಿ, ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೊಸಿಯೇಶನ್ ಸದಸ್ಯರು, ಇತರರು ಹಾಜರಿದ್ದರು.

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷರಾದ ಡಾ.ರಾಜೇಶ್ವರ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.