ಪಂಜಾಬ್‌ನಲ್ಲಿ ೪೨ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ

ಚಂಡೀಗಢ,ಮೇ.೨೩-ಚಂಡೀಗಡದಲ್ಲಿ ಸೋಮವಾರ ೪೩.೧ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಮಂಗಳವಾರದಿಂದ ಹೊಸದಾಗಿ ಪಶ್ಚಿಮ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಚಂಡೀಗಡ ಹವಾಮಾನ ಇಲಾಖೆ ನಿರ್ದೇಶಕ ಮನಮೋಹನ್ ಸಿಂಗ್ ತಿಳಿಸಿದ್ದಾರೆ. ಮೇ ೨೭ರವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಅವರು ತಿಳಿಸಿದ್ದಾರೆ.
ಗರಿಷ್ಠ ಉಷ್ಣಾಂಶ ೩೫ ಡಿಗ್ರಿ ಸೆಲ್ಸಿಯಸ್ಗಿಂತ ಕೆಳಗಿಳಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಕನಿಷ್ಠ ತಾಪಮಾನ ೨೫ ಡಿಗ್ರಿ ಸೆಲ್ಸಿಯಸ್ ಇತ್ತು. ಗರಿಷ್ಠ ತಾಪಮಾನ ೪೦.೮ ಡಿಗ್ರಿ ಸೆಲ್ಸಿಯಸ್ ತಲುಪಿರುವ ಕಾರಣ ಭಾನುವಾರ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ.