ಪಂಜಾಬ್‌ನಲ್ಲಿ ಗ್ರೆನೇಡ್ ಸ್ಫೋಟ

ಪಂಜಾಬ್, ನ.೨೨- ಪಠಾಣ್‌ಕೋಟ್‌ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್ ಬಳಿ ಇಂದು ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಮದುವೆ ಮೆರವಣಿಗೆ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಸೇನೆಯ ತ್ರಿವೇಣಿ ಗೇಟ್ ಮುಂಭಾಗ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿರುವ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದ ಗ್ರೆನೇಡ್‌ನ ಭಾಗಗಳನ್ನು ಜಫ್ತಿ ಮಾಡಿದ್ದಾರೆ.
ಸ್ಥಳದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ನಡುವೆ ಪಠಾಣ್‌ಕೋಟ್‌ನ ಎಲ್ಲಾ ಪೊಲೀಸ್ ಚೆಕ್‌ಪೋಸ್ಟ್‌ಗಳಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.