
ಬೆಂಗಳೂರು,ಮಾ.೨೩- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಚಂಡೀಘಡದಿಂದ ರಾಜ್ಯಕ್ಕೆ ಬರುವ ಪ್ರವಾಸಿಗರಿಗೆ ರಾಜ್ಯಸರ್ಕಾರ ನಿಬಂಧ ವಿಧಿಸಿದೆ.
ಈಗಾಗಲೇ ಕೇರಳ ಮತ್ತು ಮಹಾರಾಷ್ಟ್ರ ಗಡಿಗಳಲ್ಲಿ ಜನರ ಚಲನ-ವಲನಗಳ ಬಗ್ಗೆ ತೀವ್ರ ತಪಾಸಣೆಗೆ ಒಳಪಡಿಸಿ ಕೊರೊನಾ ನೆಗೆಟೀವ್ ಇದ್ದರಷ್ಟೇ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಇದರ ಬೆನ್ನಲ್ಲೆ ಪಂಜಾಬ್ ಮತ್ತು ಚಂಡೀಘಡದಿಂದ ಬರುವ ಪ್ರವಾಸಿಗರು ೭೨ ತಾಸುಗಳಿಗಿಂತ ಹಳೆಯದಾದ ವರದಿಗಳನ್ನು ಪ್ರವಾಸಿಗರು ಕಡ್ಡಾಯವಾಗಿ ತರಬೇಕು ಎಂದು ಆದೇಶ ಹೊರಡಿಸಿದೆ ಈ ನಿಯಮಗಳನ್ನು ಕರ್ನಾಟಕ ಮತ್ತು ಕೇರಳದಿಂದ ಬರುವ ಪ್ರವಾಸಿಗರಿಗೆ ಅನುಷ್ಠಾನಗೊಳಿಸಲಾಗಿದೆ.
ರಾಜ್ಯದಲ್ಲಿ ೨ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರ್ಟಿಪಿಸಿಆರ್ ವರದಿ ಕಡ್ಡಾಯವಾಗಿದೆ.
ವಿಮಾನದಲ್ಲಿ ಬರುವ ಪ್ರಯಾಣಿಕರು ವಿಮಾನ ಹತ್ತುವ ಮುನ್ನ ನೆಗೆಟೀವ್ ವರದಿ ಕಡ್ಡಾಯವಾಗಿ ತೋರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.
ಈ ರಾಜ್ಯಗಳಿಂದ ಬಸ್ನಲ್ಲಿ ಬರುವ ಪ್ರಯಾಣಿಕರು ನೆಗೆಟೀವ್ ವರದಿಯನ್ನು ತೋರಿಸಿದರೆ ಮಾತ್ರ ರಾಜ್ಯಕ್ಕೆ ಪ್ರವೇಶಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಆರೋಗ್ಯ ಕಾರ್ಯಕರ್ತರು, ೨ ವರ್ಷದೊಳಗಿನ ಮಕ್ಕಳಿಗೆ ಹಾಗೂ ಕೇಂದ್ರೀಯ ಸಿಬ್ಬಂದಿಗಳಿಗೆ ವಿನಾಯಿತಿ ನೀಡಲಾಗಿದೆ.