ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ: ಒಡೆಯರ


ಲಕ್ಷ್ಮೇಶ್ವರ,ನ1: ಶಿರಹಟ್ಟಿ ಮತಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡುವ ಕಾರ್ಯ ಮಾಡಲಾಗುತ್ತಿದೆ. ತಾಲೂಕಿನ ಪ್ರತಿ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಕಾರ್ಯವಾಗಿದೆ ಎಂದು ಜೆಡಿಎಸ್ ಪಕ್ಷದ ಮುಖಂಡ, ಶಿರಹಟ್ಟಿ ಮತಕ್ಷೇತ್ರದ ಉಸ್ತವಾರಿ ದೇವರಾಜ ಒಡೆಯರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಸಂಘಟಿಸುವ ಉದ್ದೇಶದಿಂದ ಎಲ್ಲ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ಎರ್ಪಡಿಸಲಾಗುತ್ತಿದ್ದು. ಜೆಡಿಎಸ್ ಪಕ್ಷದ ಅಧಿಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗಳು ಮಾಡಿದ ಸಾಧನೆಗಳನ್ನು ಜನರಿಗೆ ತಲುಪಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ಬರಮಾಡಿಕೊಳ್ಳುವ ಗುರಿ ಹಾಕಿಕೊಳ್ಳಲಾಗಿದೆ, ರೈತರ ಸಾಲ ಮನ್ನಾದಿಂದ ಅನ್ನದಾತರ ಬದುಕು ಹಸನಾಗಿದ್ದು ಅಂತಹ ರೈತರನ್ನು ಬೇಟಿಯಾಗಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡುವ ಮೂಲಕ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.
ಈ ವೇಳೆ ಜೆಡಿಎಸ್ ಪಕ್ಷದ ಗದಗ ಜಿಲ್ಲಾ ಅಧ್ಯಕ್ಷ ಎಂ.ಆರ್.ಸೋಂಪೂರ, ಕಾರ್ಯದರ್ಶಿ ಶಂಕರ ಬಾಳಿಕಾಯಿ, ತಾಲೂಕಾ ಅಧ್ಯಕ್ಷ ಪದ್ಮರಾಜ ಪಾಟೀಲ ಮಾತನಾಡಿದರು.
ಸಭೆಯಲ್ಲಿ ಝಾಕೀರ್‍ಹುಸೇನ ಹವಾಲ್ದಾರ, ಪುರಸಭೆ ಸದಸ್ಯ ಮುಸ್ತಾಕ್‍ಅಹ್ಮದ್ ಶಿರಹಟ್ಟಿ, ಡಿ.ಆರ್.ಪೊಲೀಸಪಾಟೀಲ, ವಿಜಯ ಆಲೂರ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.