ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲಾಗುವುದು: ಭೀಮಾಶಂಕರ್ ಪಾಟೀಲ್


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಫೆ.06: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸುವ ಬಗ್ಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಎಲ್ಲರನ್ನೂ ವಿಶ್ವಾಸ ತೆಗೆದುಕೊಳ್ಳುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ ಎಂದು ರಾಜ್ಯ ಯುವಘಟಕದ ರಾಜ್ಯಾಧ್ಯಕ್ಷ ಭೀಮಾಶಂಕರ್ ಪಾಟೀಲ್ ತಿಳಿಸಿದರು.
ನಗರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಲ್ಯಾಣ ರಾಜ್ಯ ಪ್ರಗತಿಪಕ್ಷ ಸರ್ವರಿಗೂ ಸಮಪಾಲು ಸಮಬಾಳು, ಸಿದ್ಧಾಂತ ಇಟ್ಟುಕೊಂಡು ಕಲ್ಯಾಣ ರಾಜ್ಯದ ಪ್ರಗತಿಗಾಗಿ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ಪಕ್ಷವನ್ನು ಗಾಲಿ ಜನಾರ್ದನ ರೆಡ್ಡಿ ಸ್ಥಾಪನೆ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ 49 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಪಕ್ಷ ಪ್ರಾರಂಭವಾದ ನಾಲ್ಕು ವರ್ಷಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಬಳ್ಳಾರಿ ರಾಯಚೂರು ಚಿತ್ರದುರ್ಗ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ. ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದು ಈ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.
ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಟಿ. ಧರಪ್ಪ ನಾಯಕ, ಜಿಲ್ಲಾ ಉಪಾಧ್ಯಕ್ಷ ಸಿದ್ದಯ್ಯ ಸ್ವಾಮಿ  ಮುಖಂಡರಾದ ಮಾರೆಪ್ಪ, ಬಸವರಾಜ್, ಬಂಡ್ರಾಳು ಮಲ್ಲಿಕಾರ್ಜುನ, ಪಕ್ಷದ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಇದ್ದರು.