ಪಕ್ಷ ಅಧಿಕಾರಕ್ಕೆ ಬಂದರೆ 300 ಯೂನಿಟ್ ಉಚಿತ ವಿದ್ಯುತ್:ಕೇಜ್ರಿವಾಲ್ ಭರವಸೆ

ಸೂರತ್, ಜು.21- ಮುಂಬರುವ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಡಿರುವ ಅಮ್ ಆದ್ಮಿ ಪಕ್ಷ, ಮತದಾರರ ಮನಗೆಲ್ಲಲು ಕಸರತ್ತು ನಡೆಸಿದೆ.
ಗುಜರಾತ್​ನಲ್ಲಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ, ನಗರ ಹಾಗೂ ಗ್ರಾಮೀಣ ಭಾಗದ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ತಿಂಗಳು 300 ಯುನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯಅಧ್ಯಕ್ಷ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಸೂರತ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಗೃಹಬಳಕೆ ಗ್ರಾಹಕರಿಗೆ 300 ಯುನಿಟ್ ವಿದ್ಯುಚ್ಛಕ್ತಿ ಉಚಿತವಾಗಿ ನೀಡಲಿದ್ದೇವೆ. ನಗರ ಹಾಗೂ ಗ್ರಾಮಗಳಲ್ಲಿ ವಾರದ ಎಲ್ಲ ದಿನಗಳ 24 ಗಂಟೆಯೂ ವಿದ್ಯುತ್ ಪೂರೈಕೆಯಾಗುವಂತೆ ಮಾಡುತ್ತೇವೆ ಎಂದು ಹೇಳಿದರು.
ಡಿಸೆಂಬರ್ 31, 2021ರವರೆಗೆ ಬಾಕಿ ಉಳಿದಿರುವ ವಿದ್ಯುಚ್ಛಕ್ತಿ ಬಿಲ್​ಗಳನ್ನು ಮನ್ನಾ ಮಾಡಲಾಗುವುದು ಎಂದು ತಿಳಿಸಿದರು.