ಕೆ.ಆರ್.ಪುರ, ಅ.೩- ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಸ್.ಉದಯ್ ಕುಮಾರ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಎಸ್.ಉದಯ್ ಕುಮಾರ್ ಅವರು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೆನೆ ಎಂದು ನುಡಿದರು.
ಕೆ.ಆರ್.ಪುರ, ಮಹದೇವಪುರ,ಸರ್ವಜ್ಞನಗರ,ಶಾಂತಿನಗರ,ಸಿ.ವಿ.ರಾಮನ್ ನಗರ ಕ್ಷೇತ್ರದ ಅಧ್ಯಕ್ಷರಾಗಿ ನೇಮಕ ಮಾಡಿದ್ದು,ಈ ಕ್ಷೇತ್ರದಲ್ಲಿ ಮತ್ತಷ್ಟು ಪಕ್ಷ ಸಂಘಟನೆ ಮಾಡುತ್ತೆನೆಂದು ಹೇಳಿದರು.
ಎಐಸಿಸಿ ಹಾಗೂ ಕೆಪಿಸಿಸಿ ನಾಯಕರು ನನಗೆ ಜವಾಬ್ದಾರಿ ನೀಡಿದ್ದು ಸರ್ಮಪಕವಾಗಿ ನಿರ್ವಹಿಸಿ ಶಾಸಕರಿಲ್ಲದ ಕ್ಷೇತ್ರದಲ್ಲಿ ಶಾಸಕ ಆಯ್ಕೆಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷದ ಸಂಘಟನೆ ನನ್ನ ಮುಖ್ಯ ಗುರಿಯಾಗಿದ್ದು,ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್, ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ,ಪ್ರಚಾರ ಸಮಿತಿ ಕೃಷ್ಣರೆಡ್ಡಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಬುಗೌಡ,ವಿಟಿಬಿ ಬಾಬು,ನಾಗಪ್ಪ, ಮುಖಂಡರಾದ ಎಂಸಿಸಿ ರವಿ ಪಟ್ಟಂದೂರು ಬಾಬು,ಮುತ್ಸಂದ್ರ ಬಾಬು,ಪ್ರಕಾಶ್ ರೆಡ್ಡಿ ಇದ್ದರು.