ಪಕ್ಷ ಸಂಘಟಿಸಿ ತಾ.ಪಂ ಜಿ.ಪಂ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿ

ಅಫಜಲಪುರ: ಎ.5:ಮುಂಬರುವ ತಾ.ಪಂ ಜಿ.ಪಂ ಚುನಾವಣೆಗಳ ಪ್ರಯುಕ್ತ ತಾಲೂಕಿನಾದ್ಯಂತ ಪಕ್ಷವನ್ನು ಸಂಘಟಿಸಿ ಯುವಕರನ್ನು ಪಕ್ಷಕ್ಕೆ ಸೆಳೆದು ತಾ.ಪಂ ಜಿ.ಪಂ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ ತೆಗನೂರ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಯುವ ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಸಾಧನೆಗಳು, ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ಮನಮುಟ್ಟುವ ರೀತಿಯಲ್ಲಿ ತಿಳಿಸುವ ಕೆಲಸ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು. ಹೆಚ್ಚಾಗಿ ಯುವಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ಮೂಲಕ ಪಕ್ಷ ಸಂಘಟನೆಗೆ ಬಲ ನೀಡಬೇಕು ಎಂದರು.

ಜಿಲ್ಲಾ ಉಪಾಧ್ಯಕ್ಷ ಸಚೀನ ರಾಠೋಡ, ತಾಲೂಕು ಅಧ್ಯಕ್ಷ ಭಾಗೇಶ ಬೋರೆಗಾಂವ ಮಾತನಾಡಿ ತಾಲೂಕಿನಾದ್ಯಂತ ಬಿಜೆಪಿ ಪಕ್ಷದ ಕಾರ್ಯಕರ್ತರು ಗಟ್ಟಿಯಾಗಿದ್ದಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಬರುವ ಜಿ.ಪಂ ತಾ.ಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮ ವಹಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ರಾಘವೇಂದ್ರ, ರಾಹುಲ್, ಮಂಡಲ ಪ್ರಧಾನ ಕಾರ್ಯದರ್ಶಿ ಭೀಮರಾಯ ಕಲಶೆಟ್ಟಿ, ಸುಭಾಷ ಪ್ಯಾಟಿ, ಮಡಿವಾಳ ದೇವತ್ಕಲ್, ಶರಣು ಪದಕಿ, ಸಿದ್ದರಾಮ ಹೊಸಮನಿ, ಮಾಂತು ಗೌರ, ಬಸವರಾಜ ಕರ್ಜಗಿ, ಆರೀಫ್, ಪ್ರಶಾಂತ ಹೊಸಮನಿ, ಲಕ್ಷ್ಮೀಕಾಂತ ಹೂಗಾರ ಸೇರಿದಂತೆ ಇತರರು ಇದ್ದರು.

ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಾಧವ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.