ಪಟ್ಟಣದ ಪ್ರತಿಭೆ ಕೆ.ಬಸವರಾಜ ಪ್ಯಾರಾ ಅಥ್ಲೇಟಿಕ್ಸ್ ಗೆ ಆಯ್ಕೆ


ಸಂಜೆವಾಣಿ ವಾರ್ತೆ
ತೆಕ್ಕಲಕೋಟೆ, ಜ.18: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಕೆ.ಬಸವರಾಜ ಕರ್ನಾಟಕ ರಾಜ್ಯ ಅಂಗವಿಕಲ ಕ್ರೀಡಾ ಸಂಸ್ಥೆ ಜ.20 ರಂದು ಮೈಸೂರಿನಲ್ಲಿ ಆಯೋಜಿಸಿರುವ 32ನೇ ರಾಜ್ಯಮಟ್ಟದ ಪ್ಯಾರಾ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ 400 ಮೀಟರ್ ಓಟ ಹಾಗೂ ಎತ್ತರ ಜಿಗಿತ ಸ್ಫರ್ಧೆಯಲ್ಲಿ ಭಾಗವಹಿಸುತ್ತಿದ್ದು ಸ್ಥಳೀಯರು ಅಭಿನಂದಿಸಿದ್ದಾರೆ.
ಕಳೆದ ಬಾರಿ ಒರಿಸ್ಸಾದ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿದ್ದು ಈ ಬಾರಿ ಉತ್ತಮ ಸಾಧನೆ ತೋರುವ ವಿಶ್ವಾಸದಲ್ಲಿದ್ದಾನೆ.