ಪಟ್ಟಣ ಪಂಚಾಯತಿ ಮಾಜಿ ಸದಸ್ಯನ ಹತ್ಯೆ

ವಿಜಯಪುರ,ಡಿ.3-ಪಟ್ಟಣ ಪಂಚಾಯತಿ ಮಾಜಿ ಸದಸ್ಯರೊಬ್ಬರನ್ನು ಕಲ್ಲು, ಬಡಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಆಲಮೇಲ್ ಪಟ್ಟಣದಲ್ಲಿ ನಡೆದಿದೆ.
ಆಲಮೇಲ್ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಹಾಗೂ ರೌಡಿಶೀಟರ್ ಪ್ರದೀಪ ಎಂಟಮಾನ್ ಹತ್ಯೆಯಾದವರು.
ಪ್ರದೀಪ ಎಂಟಮಾನ್ ಅವರು ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಸ್ನೇಹಿತರೊಂದಿಗೆ ತೆರಳಿದ್ದ ವೇಳೆಯಲ್ಲಿ ನಾಲ್ಕೈದು ಜನ ದುಷ್ಕರ್ಮಿಗಳು ಅವರ ಮೇಲೆ ಕಲ್ಲು, ಬಡಿಗೆಯಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಲಮೇಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.