ಪಟ್ಟಣ ಪಂಚಾಯಿತಿ ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ

ಮರಿಯಮ್ಮನಹಳ್ಳಿ, ನ.05: ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಗಾದಿಗೆ ಇಂದು ಚುನಾವಣೆ ನಡೆಯಿತು.
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಇತ್ತು.
ಉಭಯ ಪಕ್ಷಗಳಲ್ಲೂ 8 ಸದಸ್ಯರಿದ್ದು ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಇವರ ಮತಗಳೇ ನಿರ್ಣಾಯಕವಾಗಲಿರುವ ಕಾರಣ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ್ ನೇತೃತ್ವದಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿತ್ತು