ಪಟ್ಟಣ ಪಂಚಾಯ್ತಿ ಚುನಾವಣೆ ಕೈ ಜಯಭೇರಿ, ಬಿಜೆಪಿ ಮುಖಭಂಗ

ಶಿವಮೊಗ್ಗ, ಏ. ೩೦: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಗೆ ನಡೆದ ಚುನಾವಣೆಯ ಮತ ಎಣಿಕೆ ಎ. ೩೦ ರಂದು ನಡೆಯಿತು. ಎರಡು ಕಡೆ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಂಪಾದಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರೂರಲ್ಲಿಯೇ ಬಿಜೆಪಿ ತೀವ್ರ ಮುಖಭಂಗಕ್ಕೀಡಾಗಿದೆ.
ಭದ್ರಾವತಿ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಂಪಾದಿಸಿದೆ. ಒಟ್ಟಾರೆ ೩೪ ವಾಡರ್?ಗಳಲ್ಲಿ, ಕಾಂಗ್ರೆಸ್ ಪಕ್ಷವು ೧೮ ಸ್ಥಾನಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಮತ್ತೆ ನಗರಸಭೆ ಆಡಳಿತ ಗದ್ದುಗೆಯೇರಿದೆ.
ಉಳಿದಂತೆ ಜೆಡಿಎಸ್ ಪಕ್ಷವು ೧೧, ಬಿಜೆಪಿ ಪಕ್ಷ ಕೇವಲ ೪ ಸ್ಥಾನಗಳಲ್ಲಿ ಜಯ ಸಂಪಾದಿಸಿ, ತೀವ್ರ ಹಿನ್ನಡೆ ಅನುಭವಿಸಿದೆ. ಓರ್ವ ಪಕ್ಷೇತರ ಅಭ್ಯಥರ್? ಆಯ್ಕೆಯಾಗಿದ್ದಾರೆ. ಪ್ರಸ್ತುತ ಚುನಾವಣೆಯನ್ನು ಬಿಜೆಪಿ ಪಕ್ಷವು ಸವಾಲಾಗಿ ತೆಗೆದುಕೊಂಡಿತ್ತು. ಪಕ್ಷದ ಅತಿರಥ-ಮಹಾರಥ ನಾಯಕರು ಭದ್ರಾವತಿ ಪಟ್ಟಣದಲ್ಲಿ ಪ್ರಚಾರ ನಡೆಸಿದ್ದರು. ಆದರೆ ಕೇವಲ ೪ ಸ್ಥಾನಗಳಿಗೆ ಆ ಪಕ್ಷ ತೃಪ್ತಿಪಟ್ಟುಕೊಳ್ಳುವಂತಾಗಿದೆ. ತೀರ್ಥಹಳ್ಳಿ: ಪಟ್ಟಣ ಪಂಚಾಯ್ತಿಯ ೧೫ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು ಒಟ್ಟು ೯ ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಸ್ಪಷ್ಟ ಬಹುಮತದೊಂದಿಗೆ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಸಫಲವಾಗಿದೆ.
ಆಡಳಿತಾರೂಢ ಬಿಜೆಪಿ ಪಕ್ಷ ಕೇವಲ ೬ ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ತೀವ್ರ ಹಿನ್ನಡೆ ಅನುಭವಿಸಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಜಯ ಸಾಧಿಸಿತ್ತು. ಆದರೆ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಆ ಪಕ್ಷ ತೀವ್ರ ಹಿನ್ನಡೆ ಸಾಧಿಸಿರುವುದು, ಸ್ಥಳೀಯ ಬಿಜೆಪಿ ನಾಯಕರಿಗೆ ತೀವ್ರ ಮುಜುಗರವುಂಟು ಮಾಡಿದೆ.