ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕರೆ

(ಸಂಜೆವಾಣಿ ವಾರ್ತೆ)
ಬಾದಾಮಿ,ಆ14: ಪಠ್ಯದ ಜೊತೆಗೆ ಪಠ್ಯೇತರ ಚಟುವಗಳು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಬೌದ್ಧಿಕ ಸಾಮಥ್ರ್ಯವನ್ನು ಹೆಚ್ಚಿಸುತ್ತವೆ ಎಂದು ಮಾಜಿ ಸಚಿವ, ಶ್ರೀ ಕಾಳದಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಬಿ.ಚಿಮ್ಮನಕಟ್ಟಿ ಹೇಳಿದರು.
ಅವರು ಪಟ್ಟಣದ ಹೊರವಲಯದ ಬನಶಂಕರಿ ರಸ್ತೆಯ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯಯಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಶ್ರೀ ಕಾಳಿದಾಸ ಸಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ವಿದ್ಯಾರ್ಥಿಗಳಿಗೆ ಸ್ವಾಗತ ಕ್ರೀಡಾ ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಾಚಾರ್ಯ ಬೆಟ್ಟಪ್ಪ ಕಟಾಪೂರ ಮಾತನಾಡಿ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸನ್ನು ಹುಟ್ಟು ಹಾಕಲು ಸಾಧ್ಯ ಎಂದು ತಿಳಿಸಿದರು. ಸಂಸ್ಥೆಯ ಸಂಪರ್ಕಾಧಿಕಾರಿ ಶರಣಗೌಡ ಪಾಟೀಲ, ಎಚ್.ಎಸ್.ನರೆನ್ನವರ ಸೇರಿದಂತೆ ಅಂಗ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.