ಪಠ್ಯೇತರ ಚಟುವಟಿಕೆಗಳು  ಮುಖ್ಯ  

ಸಂಜೆವಾಣಿ ವಾರ್ತೆ

 ಹಿರಿಯೂರು.ಡಿ.3- ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮಹತ್ವವನ್ನು ಹೊಂದಿದ್ದು ವಿದ್ಯಾರ್ಥಿಗಳು ಕ್ರೀಡೆಗಳಲ್ಲೂ ಭಾಗವಹಿಸಬೇಕು ಎಂದು  ಇನ್ನರ್ ವೀಲ್  ಕ್ಲಬ್ ನ ಸದಸ್ಯರಾದ ಶ್ರೀಮತಿ ಪ್ರೇಮ ಹೇಳಿದರು.  ಹಿರಿಯೂರು ತಾಲೂಕಿನ  ವೀರವ್ವ ನಾಗತಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಇನ್ನರ್ವೀಲ್ ಕ್ಲಬ್ ವತಿಯಿಂದ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದದವರು  ಸಿಬ್ಬಂದಿ ವರ್ಗದವರು ಹಾಗೂ ಪೋಷಕರು  ಉಪಸ್ಥಿತರಿದ್ದರು