
ಸಂಜೆವಾಣಿ ವಾರ್ತೆ
ಸಿರುಗುಪ್ಪ, ಮೇ.17 ತೆಕ್ಕಲಕೋಟೆ ಪಟ್ಟಣದ ಹಿಟ್ಟಿನ ಗಿರಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಯಿತು.
ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 6ನೇ ವಾರ್ಡಿನಲ್ಲಿರುವ ಹಿಟ್ಟಿನ ಗಿರಣಿಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 3 ಕ್ವಿಂಟಲ್ 20 ಕೆ.ಜಿ ಪಡಿತರ ಅಕ್ಕಿಯನ್ನು ಮಂಗಳವಾರ ಜಪ್ತಿ ಮಾಡಲಾಗಿದೆ.
ಆಹಾರ ಇಲಾಖೆಯ ಶಿರಸ್ತೇದಾರ ಟಿ.ಮಹೇಶ್ ಅವರಿಗೆ ಖಚಿತ ಮಾಹಿತಿ ಮೇರೆಗೆ ಪಟ್ಟಣದ ತನಿಖಾ ವಿಭಾಗದ ಪಿ.ಎಸ್.ಐ ಸಂಗಮೇಶ್ವರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಮಲ್ಲಡೆ ಅಬ್ದುಲ್ ಖಾದರ್ ಜೀಲಾನಿ ಅವರ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿ ಇಟ್ಟಿದ್ದ 7360 ಮೌಲ್ಯದ 3.20 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡು. ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.