
ಕಲಬುರಗಿ,ಆ.22:ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸರ್ಕಾರವು ಕಾಲಾವಕಾಶ ನೀಡಿದೆ ಎಂದು ಕಲಬುರಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಜಿ. ಗುಣಕಿ ಅವರು ತಿಳಿಸಿದ್ದಾರೆ.
ಅದೇ ರೀತಿ ಮುಂದಿನ ತಿಂಗಳು ಸಹ 2023ರ ಸೆಪ್ಟೆಂಬರ್ 1 ರಿಂದ 10 ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಾಯಾಂಕಾಲ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಈ ಮೇಲ್ಕಂಡ ದಿನಾಂಕಗಳಂದು ತಮ್ಮ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಸೇರ್ಪಡೆಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.