ಪತ್ನಿಯಿಂದ ಪತಿಯ ಭೀಕರ ಹತ್ಯೆ

ಬೆಂಗಳೂರು, ಡಿ.೨೧-ರಾಜಧಾನಿ ಬೆಂಗಳೂರಿನಲ್ಲಿ ಪತ್ನಿಯಿಂದಲೇ ಪತಿ ಬರ್ಬರ ಹತ್ಯೆಗೈದ ಪ್ರಕರಣವೊಂದು ನಡೆದಿದ್ದು, ಆರೋಪಿ ಮನಿಷಾಳನ್ನ ಬಂಧಿಸಿ ಹುಳಿಮಾವು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಮೇಶ್ ದಾಮಿ (೨೭) ಕೊಲೆಯಾದ ಪತಿಯಾಗಿದ್ದು, ಈತನನ್ನು ಪತ್ನಿ ಮನಿಷಾ ದಾಮಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.
ಈ ದಂಪತಿ ಕಾಲೇಜೊಂದರಲ್ಲಿ ಸೆಕ್ಯುರಿಟಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದಂದು ಉಮೇಶ್ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ರಾತ್ರಿ ೧೨ ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗಿದ್ದ. ಆ ವೇಳೆ ಮನಿಷಾ ಫೋನ್ ನಲ್ಲಿ ಮಾತನಾಡುತ್ತಿದ್ದಳು.
ಇದರಿಂದ ಕೋಪಗೊಂಡ ಉಮೇಶ್ ಆಕೆಯ ಜೊತೆಗೆ ಜಗಳವಾಡಿದ್ದಾನೆ.ಅನೈತಿಕ ಸಂಬಂಧ ಹೊಂದಿರೋ ಬಗ್ಗೆ ಅನುಮಾನದಿಂದ ಪತ್ನಿ ಜೊತೆ ಗಲಾಟೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋದಾಗ ಮನಿಷಾ, ಚಾಕು ತೆಗೆದುಕೊಂಡು ಉಮೇಶ್ ದಾಮಿಗೆ ಇರಿದಿದ್ದಾಳೆ.
ಪರಿಣಾಮ ತೀವ್ರ ರಕ್ತಸ್ರಾವದಿಂದ ಉಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಉಮೇಶ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಸದ್ಯ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.