ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಶಹಾಪುರ,ಮೇ.17-ಪತ್ನಿಯನ್ನು ಪತಿಯೇ ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾದ ಘಟನೆ ಶಹಾಪುರ ತಾಲ್ಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ.
ನಿಂಗಪ್ಪ ಎಂಬಾತನೆ ಪತ್ನಿ ಲಕ್ಷ್ಮೀಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿದ್ದು, ಕೊಲೆಗೆ ಕೌಟುಂಬಿಕ ಕಲಹವೇ ಕಾರಣವೆನ್ನಲಾಗುತ್ತಿದೆ.
ಕೌಟುಂಬಿಕ ಕಲಹದಿಂದಾಗಿ ಪತಿ ಹಾಗೂ ಪತ್ನಿ ಇಬ್ಬರೂ ದೂರವಿದ್ದರು. ಮಗಳ ಮದುವೆಗೆಂದು ಪತಿ ನಿಂಗಪ್ಪ ಮನೆಗೆ ವಾಪಸ್ ಬಂದಿದ್ದ.
ರಾತ್ರಿ ಪತ್ನಿ ಕತ್ತು ಹಿಸುಕಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.