ಪತ್ರಕರ್ತರ ಪರಿಶ್ರಮ ಅಪಾರ: ಮುಕ್ತಿಮಂದಿರಶ್ರೀ


ಲಕ್ಷ್ಮೇಶ್ವರ,ಜು.25: ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಚನ್ನಮ್ಮನ ವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಸಾನಿಧ್ಯ ವಹಿಸಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದ ಮುಕ್ತಿಮಂದಿರ ವಿಮಲರೇಣುಕ ವೀರಮುಕ್ತಿಮನಿ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವಚನ ನೀಡಿ, ಸುದ್ದಿಗಳನ್ನು ಸಂಗ್ರಹಿಸಿ ಅವುಗಳಿಗೆ ರೂಪ ಕೊಟ್ಟು ಪತ್ರಿಕೆಗಳಲ್ಲಿ ಮುದ್ರಣವಾಗುವ ತನಕ ಪತ್ರಕರ್ತರ ಪರಿಶ್ರಮ ಬಹಳಷ್ಟು ಇರುತ್ತದೆ.
ಸರ್ಕಾರ ಮತ್ತು ಸಮಾಜದ ಅಂಕು ಡೊಂಕುಗಳನ್ನು, ಓರೆ ಕೋರೆಗಳನ್ನು ತಿದ್ದುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ, ಸಮಾಜದ, ರಾಜ್ಯದ ಮತ್ತು ದೇಶದ ಅಭಿವೃದ್ಧಿ ಮತ್ತು ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದ್ದು, ಶಾಸಕರು, ಮಾಜಿ ಶಾಸಕರು, ಸ್ಥಳೀಯ ಪುರಸಭೆಯವರು ಪತ್ರಕರ್ತರ ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ನೆರವು ನೀಡಬೇಕು ಎಂದರು.
ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರ, ಜಿ.ಎಸ್ ಗಡ್ಡದೇವರಮಠ ಅವರು ಮಾತನಾಡಿ ಪತ್ರಕರ್ತರ ಬೇಡಿಕೆಗೆ ಸ್ಪಂದಿಸುವುದಾಗಿ ಹಾಗೂ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರಲ್ಲದೆ, ಸರ್ಕಾರ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಸೌಲಭ್ಯಗಳನ್ನು ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ರಾಜ್ಯ ಕಾರ್ಯಕಾರಣಿ ಸದಸ್ಯ ಚೌಡಿ, ಪುರಸಭೆ ಅಧ್ಯಕ್ಷೆ ಅಶ್ವಿನಿ ಅಂಕಲಕೋಟಿ, ಮಹೇಶ್ ಲಮಾಣಿ, ಎಸ್.ಪಿ. ಬಳಿಗಾರ, ಡಾ. ಚಂದ್ರು ಲಮಾಣಿ, ಈಶ್ವರ್ ಮೇಡ್ಲೇರಿ, ಮಂಜುನಾಥ ಮಾಗಡಿ, ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾ ಅಧ್ಯಕ್ಷ ಮಲ್ಲಿಕಾರ್ಜುನ ಕಳಸಾಪುರ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಮಂಜುಳಾ ನಂದೆಣ್ಣವರ, ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಹೊಗೆಸೊಪ್ಪಿನ, ಡಿ.ಎಂ. ಪೂಜಾರ್, ಚಂಬಣ್ಣ ಬಾಳಿಕಾಯಿ, ಬಸವೇಶ ಮಹಾಂತಶೆಟ್ಟರ್ , ಸಿಪಿಐ ವಿಕಾಸ ಲಮಾಣಿ, ಮುಕ್ತಾರ್ ಅಹ್ಮದ್ ಗದಗ ಇದ್ದರು.
ಬಸವರಾಜ್ ಬಾಳೇಶ್ವರಮಠ, ರಮೇಶ ನಾಡಿಗೇರ, ಅಶೋಕ ಸೊರಟೂರ್, ನಾಗರಾಜ್ ಹಣಗಿ ನಿರ್ವಹಿಸಿದರು.