ಪತ್ರಕರ್ತರ ಪಾತ್ರ ಪ್ರಾಮುಖ್ಯತೆ ಪಡೆದಿದೆ : ಡಿ. ಸುಧಾಕರ್

ಸಂಜೆವಾಣಿ ವಾರ್ತೆ

ಹಿರಿಯೂರು: ಅ.31-ಇಂದಿನ ಸಮಾಜದಲ್ಲಿ ಪತ್ರಕರ್ತರ ಪಾತ್ರ ತುಂಬಾ ಪ್ರಾಮುಖ್ಯತೆ ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಯೋಜನೆ ಮತ್ತು ಸಾಂಕೀಕ ಖಾತೆಯ ಸಚಿವರಾದ ಡಿ. ಸುಧಾಕರ್ ಹೇಳಿದರುನಗರದ ರೋಟರಿ ಸಭಾ ಭವನದಲ್ಲಿ  ಸಾಧಕರಿಗೆ ಸನ್ಮಾನ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬoಗ್ಲೆ ಮಲ್ಲಿಕಾರ್ಜುನ್  ಮಾತನಾಡಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಜನಪರ ಯೋಜನೆಗಳಿಗೆ ಸಾವಿರಾರು ಕೋಟಿ ರೂಗಳನ್ನು ಖರ್ಚು ಮಾಡುತ್ತಿದೆ. ಆದರೆ ಅದೇ ರೀತಿ ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ಶ್ರೇಯೋಭಿವೃದ್ಧಿಯ ಕಡೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಆಲೂರು ಹನುಮಂತರಾಯಪ್ಪ, ಕಲಾವಿದರಾದ ಮಲ್ಲಪ್ಪನ ಹಳ್ಳಿ ಮಹಲಿಂಗಪ್ಪ, ಎಂಎಸ್ಸಿ ಅಗ್ರಿಯಲ್ಲಿ ಚಿನ್ನದ ಪದಕ ಪಡೆದ ಅರ್ಪಿತಾ ಗೋಸಿಕೆರೆ ರಂಗನಾಥ್, ಕವಯಿತ್ರಿ ಸರಸ್ವತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ಹೆಚ್.ಎಸ್.ಮಾರುತೇಶ್, ಗೌರವಾಧ್ಯಕ್ಷ ಐನಹಳ್ಳಿ ಇಬ್ರಾಹಿಂ, ಕಾರ್ಯಾಧ್ಯಕ್ಷ ಅರ್ಜುನ್ ಬ್ಯಾಡರಹಳ್ಳಿ, ಪ್ರಧಾನ ಕಾರ್ಯದರ್ಶಿ ಜಿ.ಕೆ.ಮಾರುತಿ,ಚಳ್ಳಕೆರೆ ದ್ಯಾಮರಾಜ್, ಚಿತ್ರಹಳ್ಳಿ ಶ್ರೀಧರ್, ಜಗಳೂರು ರಾಜಪ್ಪ, ಶಿರಾ ಸ್ವಾಮಿಲಿಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಕಂದಿಕೆರೆ ಸುರೇಶ್ ಬಾಬು, ನಗರಸಭೆ ಸದಸ್ಯರಾದ ಈರಲಿಂಗೇಗೌಡ, ಶಿವಕುಮಾರ್, ವಿಠ್ಠಲ್ ಪಾಂಡುರಂಗ, ರಮೇಶ್ ಮಸ್ಕಲ್ ಮಟ್ಟಿ, ರಾಮಚಂದ್ರಪ್ಪ, ರಾಘವೇಂದ್ರ, ಗೋಸಿಕೆರೆ ರಂಗನಾಥ್, ಪಿ.ಆರ್.ಸತೀಶ್ ಬಾಬು ಮತ್ತಿತರರು ಪಾಲ್ಗೊಂಡಿದ್ದರು