ಪತ್ರಕರ್ತರ ರಾಜ್ಯ ಸಮ್ಮೇಳನದ ಪೂರ್ವ ಸಿದ್ದತಾ ಸಭೆ: ಸಂಘದ ವೆಬ್ ಸೈಟ್ ಉದ್ಘಾಟನೆ

ದಾವಣಗೆರೆ.ಆ.೨೮; ನಗರದಲ್ಲಿ ನಡೆಯಲಿರುವ 38 ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಪೂರ್ವ ಸಿದ್ದತಾ ಸಭೆಯನ್ನು  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ರವರು ಉದ್ಘಾಟಿಸಿದರು, ಜೊತೆಗೆ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್ ಸೈಟ್ ಉದ್ಘಾಟನೆ ಮಾಡಿದರು. ಈ ವೇಳೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ್ ಹೊಳ್ಳ, ಜಿಲ್ಲಾ ಅಧ್ಯಕ್ಷ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ರಾಜ್ಯ ಸಮಿತಿ ಸದಸ್ಯರಾದ ಕೆ.ಚಂದ್ರಣ್ಣ,  ವರದಿಗಾರರ ಕೂಟದ ಅಧ್ಯಕ್ಷರಾದ ಕೆ.ಏಕಾಂತಪ್ಪ, ವಾರ್ತಾಧಿಕಾರಿ ಧನಂಜಯ.ಬಿ  ಹಾಗೂ ಪದಾಧಿಕಾರಿಗಳು, ಹಿರಿಯ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.