ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನ ಅನಾವರಣ

ಸಂಜೆವಾಣಿ ವಾರ್ತೆ

ದಾವಣಗೆರೆ, ನ. 25- ಬರುವ ಜನವರಿ ಮಾಹೆಯಲ್ಲಿ ದಾವಣಗೆರೆಯಲ್ಲಿ ನಡೆಸಲುದ್ದೇಶಿಸಿರುವ ಪತ್ರರ‍್ತರ 38ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣ ಮಾಡಿದರು.ಮುಖ್ಯಮಂತ್ರಿಗಳ ಗೃಹ ಕಛೇರಿ `ಕಾವೇರಿ’ ಯಲ್ಲಿ ನಿನ್ನೆ ರ‍್ಪಾಡಾಗಿದ್ದ ಸರಳ ಸಮಾರಂಭದಲ್ಲಿ ದಾವಣಗೆರೆ ಜಿಲ್ಲೆಗೆ ಕರ‍್ತಿ ತರುವಂತಿರುವ ಪ್ರೇಕ್ಷಣೀಯ ಸ್ಥಳಗಳನ್ನೊಳಗೊಂಡಿರುವ ಲಾಂಛನವನ್ನು ಮುಖ್ಯಮಂತ್ರಿಗಳು ಅನಾವರಣ ಮಾಡಿದಾಗ ಪತ್ರರ‍್ತರು ಚಪ್ಪಾಳೆ ತಟ್ಟುವುದರ ಮೂಲಕ ಸಂಭ್ರಮಿಸಿದರು. ಈ ಸಂರ‍್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮ್ಮೇಳನವು ರಾಜ್ಯದ ಸಮಸ್ತ ಪತ್ರರ‍್ತರ ಶ್ರೇಯೋಭಿವೃದ್ಧಿಗೆ ಪೂರಕವಾಗಿರುವ ನಿಟ್ಟಿನಲ್ಲಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಸಮ್ಮೇಳನದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಖಾತೆ ಸಚಿವರೂ ಆಗಿರುವ ರಾಜ್ಯ ಪತ್ರರ‍್ತರ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಶಾಮನೂರು ಮಲ್ಲಿಕರ‍್ಜುನ್ ಅವರು ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು, ಸಮ್ಮೇಳನಕ್ಕೆ ರ‍್ಕಾರದಿಂದ ಸಹಕಾರ ನೀಡುವುದಲ್ಲದೇ, ಈ ಸಮ್ಮೇಳನದಲ್ಲಿ ತಾವು ಭಾಗವಹಿಸುವ ಬಗ್ಗೆ ಶೀಘ್ರ ದಿನಾಂಕ ನಿಗದಿಪಡಿಸುವುದಾಗಿ ಭರವಸೆ ನೀಡಿದರು.ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ಮಾತನಾಡಿ, ತಾವು ಸಮ್ಮೇಳನಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರಲ್ಲದೇ, ನಾವೆಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದರು.ಕರ‍್ನಾಟಕ ಕಾರ‍್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, 2 ದಿನಗಳ ಈ ಸಮ್ಮೇಳನವು ರಾಜ್ಯದ ಮಧ್ಯಬಿಂದು ದಾವಣಗೆರೆಯಲ್ಲಿ ನಡೆಯುತ್ತಿರುವುದರಿಂದ ರಾಜ್ಯದ ಮೂಲೆ-ಮೂಲೆಗಳಿಂದ ಸುಮಾರು 6000ಕ್ಕೂ ಹೆಚ್ಚು ಪತ್ರರ‍್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.ಕರ‍್ನಾಟಕ ಕಾರ‍್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಮಾತನಾಡಿ, ಈ ಸಮ್ಮೇಳನವು  ಹಿಂದೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ತಾಲ್ಲೂಕು ಆಗಿದ್ದ ದಾವಣಗೆರೆಯಲ್ಲಿ ನಡೆದಿತ್ತು. ಈಗ, ದಾವಣಗೆರೆ ಜಿಲ್ಲೆ ರಚನೆಯಾದ 25 ವರ್ಷಗಳ ನಂತರ ಇದೇ ಪ್ರಪ್ರಥಮ ಸಮ್ಮೇಳನ ಎಂದು ಹೇಳಿದರು.