ಪತ್ರಕರ್ತರ ಸಂಘದ ನಿರ್ದೇಶಕರಾಗಿ ಬಸವರಾಜು. ವೈ.ಕೆ. ಮೋಳೆ ನೇಮಕ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.08- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾಗಿ ಸುದ್ದಿ ಸಂಜೆ ದಿನಪತ್ರಿಕೆಯ ಜಿಲ್ಲಾ ವರದಿಗಾರ ಬಸವರಾಜು. ವೈ.ಕೆ.ಮೋಳೆ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದ ತೀರ್ಮಾನದ ತೆಗೆದುಕೊಂಡು ಜಿಲ್ಲಾ ಘಟಕದ ನಿರ್ದೇಶಕ ಸ್ಥಾನಕ್ಕೆ ಸುದ್ದಿ ಸಂಜೆ ದಿನಪತ್ರಿಕೆಯ ಜಿಲ್ಲಾ ವರದಿಗಾರ ಬಸವರಾಜು. ವೈ.ಕೆ. ಮೋಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.