
ಹುಣಸಗಿ:ಫೆ.27: ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಸಾಯಂಕಾಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಏರ್ಪಡಿಸಲಾದ ಮೊದಲ ರಾಜ್ಯ ಸಮ್ಮೇಳನವು ಅದ್ದೂರಿಯಾಗಿ ಜರುಗಿತು.
ಈ ವೇಳೆ ಪತ್ರಕರ್ತರ ರಾಜ್ಯ ಸಮ್ಮೇಳನದ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ವಿ. ಗೋಪಾಲಗೌಡ ಅವರು ಉದ್ಘಾಟಿಸಿದರು.
ನಂತರ ಪತ್ರಕರ್ತರ ಸಮಸ್ಯೆ ಹಾಗೂ ರೈತರ ಸಮಸ್ಯೆಗಳ ಕುರಿತು ಸುಧೀರ್ಘವಾಗಿ ಮಾತನಾಡಿದ ಅವರು, ರಾಜ್ಯದ ಪತ್ರಕರ್ತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿ ನೆರವು ನೀಡಬೇಕು ಎಂದರು.
ಜೊತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ನಡೆಸುವ ಸರ್ಕಾರ ಉತ್ತಮ ನೀತಿ ನಿಯಮಗಳಿಂದ ಇರಬೇಕು ಇದರಲ್ಲಿ ಸ್ವಲ್ಪ ಎಡವಿದರೆ ನಾಲ್ಕನೇ ಪಿಲ್ಲರ್ ಎನಿಸಿಕೊಂಡು ಪತ್ರಿಕೆ/ ಮಾಧ್ಯಮ ಅದನ್ನು ಜನರ ಗಮನ ಸೆಳೆದು ಬಹು ದೊಡ್ಡ ರೀತಿಯಲ್ಲಿ ಕಾರ್ಯನಿರ್ವಹಿಸುವ ಜವಾಬ್ದಾರಿ ಪತ್ರಕರ್ತರಿಗೆ ಇದೆ ಅಂತಾ ಹೇಳಿದರು.
ಇನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಕ.ಕಾ.ನಿ.ಪ. ಧ್ವನಿ ಸಂಘಟನೆಯ ಪತ್ರಕರ್ತರು ಮಾತ್ರ ಅಲ್ಲದೇ ರಾಜ್ಯದಲ್ಲಿರುವ ಒಟ್ಟು 16 ಸಾವಿರ ಪತ್ರಕರ್ತರ ಜ್ವಲಂತ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟು ಎಲ್ಲಾ ಪತ್ರಕರ್ತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸಂಘಟನೆಯಿಂದ ಮಾಡಲಾಗುವುದು ಎಂದರು.
ಇದಲ್ಲದೆ ಸಿಎಂ. ಬೊಮ್ಮಾಯಿ ಅವರು ಬಜೆಟ್ ನಲ್ಲಿ ಪತ್ರಕರ್ತರಿಗೆ ಯಾವುದೇ ನೆರವು ನೀಡುವ ಕೆಲಸ ಮಾಡಿಲ್ಲ. ಸರಳ ಸಜ್ಜನಿಕೆಯ ವ್ಯಕ್ತಿ ಅಂತ ಕರೆಯಿಸಿಕೊಂಡು ಪತ್ರಕರ್ತರಿಗೆ ಬಜೆಟ್ ನಲ್ಲಿ ನ್ಯಾಯ ಒದಗಿಸಲಾಗುವುದು ಎಂದು ಹೇಳಿ ಪತ್ರಕರ್ತರ ಕಷ್ಟಕ್ಕೆ ಸ್ಪಂದಿಸುವ ಹೃದಯವಂತಿಕೆ ಇಲ್ಲದ ವ್ಯಕ್ತಿಯಾಗಿದ್ದಾರೆ ಇದನ್ನು ನಮ್ಮ ಸಂಘಟನೆಯಿಂದ ಮುಂದಿನ ದಿನಮಾನಗಳಲ್ಲಿ ಸರಕಾರಕ್ಕೆ ಎಚ್ಚರಿಕೆಯ ಘಂಟೆಯನ್ನು ತೋರಿಸಲಾಗುವುದು ಮತ್ತು ಪತ್ರಕರ್ತರಿಗೆ ಸರಕಾರದ ಸೌಲಭ್ಯಗಳನ್ನು ನೀಡುತ್ತೇವೆ ಎಂದು ಹೇಳಿದ ಭರವಸೆಗಳನ್ನು ಕೂಡಾ ಅವರು ಈಡೇರಿಸಿಲ್ಲ ಇದರ ವಿರುದ್ಧ ಹೋರಾಟವನ್ನು ಸಹ ಮಾಡಲಾಗುತ್ತದೆ ಎಂದು ಹೇಳಿದರು.
ಟಿ.ವಿ 5 ಕಾರ್ಯನಿರ್ವಾಹಕ ಸಂಪಾದಕರು ಆದ ಎ.ಎಸ್. ರಮಾಕಾಂತ್ ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಮಹರ್ಷಿ ಆನಂದ ಗುರೂಜಿ ವಹಿಸಿಕೊಂಡಿದ್ದರು. ಉಳಿದಂತೆ ಕಾರ್ಯಕ್ರಮದಲ್ಲಿ ವಿವಿಧ ರೈತ ಮುಖಂಡರು, ರಾಜಕೀಯ ಮುಖಂಡರು, ಸೇರಿದಂತೆ ಅನೇಕರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
- ಈ ವೇಳೆ ಹುಬ್ಬಳ್ಳಿಯ ವಿಶ್ವದರ್ಶನ ಪತ್ರಿಕೆಯ ಸಂಪಾದಕರಾದ ಎಸ್.ಎಸ್.ಪಾಟೀಲ್, ವಿವಿಧ ಪತ್ರಿಕೆಯ ಸಂಪಾದಕರು, ಸಹಸಂಪಾದಕರು, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ ಶೆಟ್ಟಿ ಮತ್ತು ರಾಜ್ಯದ ಎಲ್ಲಾ ಜಿಲ್ಲೆ ತಾಲೂಕು ಪತ್ರಕರ್ತರು ಈ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು