ಪತ್ರಕರ್ತ ಅರ್ನಾಬ್ ಗೆ ಮದ್ಯಂತರ ಜಾಮೀನು

ನವದೆಹಲಿ, ನ.12- 2018ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನದಲ್ಲಿರುವ ಪತ್ರಕರ್ತ ಅರ್ನಾಬ್ ಗೋ ಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಮದ್ಯಂತರ ಜಾಮೀನು ನೀಡಿದೆ.

ಬಿ-ರಿಪೋರ್ಟ್​ ಸಲ್ಲಿಸಲಾಗಿದ್ದ ಪ್ರಕರಣವನ್ನು ಮತ್ತೆ ಕೈಗೆತ್ತಿಕೊಂಡು ತಮ್ಮನ್ನು ‌ಮಹಾರಾಷ್ಟ್ರ ಪೊಲೀಸರು ತಮ್ಮನ ಬಂಧಿಸಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಗೆ ಜಾಮೀನು ಅರ್ಜಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅರ್ಜಿ ತಿರಸ್ಕರಿಸಲಾಗಿತ್ತು

ಈ ಹಿನ್ನೆಲೆಯಲ್ಲಿ ಅರ್ನಬ್ ಗೋ ಸ್ವಾಮಿ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು.

ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದ ನ್ಯಾಯಪೀಠ 50 ಸಾವಿರ ರೂಪಾಯಿ ಮೊತ್ತದ ಬಾಂಡ್ ಹಾಗು ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದ್ದಾರೆ

53 ವರ್ಷದ ಇಂಟೀರಿಯರ್ ಡಿಸೈನರ್‌ನನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇಲೆ ರಾಯಗಡ್ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನವೆಂಬರ್ 14 ರಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು

ಈ ಕುರಿತು ಮಾಹಿತಿ ನೀಡಿದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು, ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮುಂಬೈ ಪೊಲೀಸ್ ಆಯುಕ್ತರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ ಎಂದು ಅವರು ಹೇಳಿದರು.