ಸಂಜೆವಾಣಿ ವಾರ್ತೆ
ಕುಕನೂರ, ಏ.14: ಪಟ್ಟಣದ ಪತ್ರಕರ್ತ ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಯಲಬುರ್ಗಾ ತಾಲೂಕ ಸಂಘದ ಮಾಜಿ ಅಧ್ಯಕ್ಷ ರಮೇಶ ರಾಜೂರ (42) ಗುರುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ ಸೇರಿ ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರು, ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸ್ವ ಗ್ರಾಮ ಕುಕನೂರ ಪಟ್ಟಣದ ರುದ್ರಭೂಮಿಯಲ್ಲಿ ನೆರವೇರಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಜೂರ ಅವರ ನಿಧನಕ್ಕೆ ಅನೇಕ ಗಣ್ಯರು ಹಾಗೂ ವಿವಿಧ ಮಾಧ್ಯಮ ಸಂಘಟನೆ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ