ಪತ್ರಾಗಾರ ಕೂಟ: ರಾಜ್ಯ ಮಟ್ಟದ ಕಾರ್ಯಾಗಾರ

ಕಲಬುರಗಿ,ಡಿ.21-ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ವಿಭಾಗೀಯ ಪತ್ರಾಗಾರ ಕಚೇರಿ ಸಹಯೋಗದಲ್ಲಿ ಐತಿಹಾಸಿಕ ದಾಖಲೆಗಳು ಮತ್ತು ಅವುಗಳ ಮಹತ್ವ ವಿಷಯ ಕುರಿತು ಪತ್ರಾಗಾರ ಕೂಟ 2023: ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿಂದು ನಡೆಯಿತು.
ವಿಭಾಗೀಯ ಪತ್ರಾಗಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಾ.ವೀರಶೆಟ್ಟಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಚಾರ್ಯ ದೇವಣಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಜೇವರ್ಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಡಾ.ಗೋವಿಂದರಾಜ ಅಲ್ದಾಳ, ಆದರ್ಶ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಜೆ.ಮಲ್ಲಪ್ಪಾ, ಕಲ್ಯಾಣ ಕರ್ನಾಟಕ ಇತಿಹಾಸ ರಚನಾ ಸಮಿತಿ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮರಾಠಿ ಉಪನ್ಯಾಸಕ ಯಶವಂತ ಸೂರ್ಯವಂಶಿ, ಹಿಂದಿ ಉಪನ್ಯಾಸಕಿ ಶ್ರೀದೇವಿ ಬಾವಿದೊಡ್ಡಿ, ಇತಿಹಾಸ ಉಪನ್ಯಾಸಕಿ ಜಯಶ್ರೀ ಬಿರಾದಾರ, ರಾಜ್ಯಶಾಸ್ತ್ರ ಉಪನ್ಯಾಸಕಿ ನಾಗರತ್ನ ಇಂಡೆ, ಇತಿಹಾಸ ಉಪನ್ಯಾಸಕಿ ಡಾ.ಪ್ರಭಾವತಿ ಭವಾನರಾವ್, ಶೀಲಾದೇವಿ, ಡಾ.ಮಂಜುಳಾ, ಭೀಮಯ್ಯ ಎಸ್.ಪಿ, ಸಿರಾಜ್ ಪಟೇಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.