ಪತ್ರಿಕಾ ದಿನಾಚರಣೆ


(ಸಂಜೆವಾಣಿ ವಾರ್ತೆ)
ಲಕ್ಷ್ಮೇಶ್ವರ,ಜು31: ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಾಲಯದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾಕ್ಟರ್ ಚಂದ್ರು ಲಮಾಣಿ ಅವರು ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಪತ್ರಕರ್ತರು ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುವವರನ್ನು ಗುರುತಿಸಿ ಸಮಾಜಕ್ಕೆ ಬಿಂಬಿಸುವ ಕೆಲಸವನ್ನು ಮಾಡುತ್ತಾರೆ . ಪತ್ರಕರ್ತರು ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಜನರನ್ನು ಸರಿಯಾದ ದಾರಿಗೆ ತರುವ ಹಾಗೂ ಸರ್ಕಾರಗಳು ಜನ ವಿರೋಧಿ ಕ್ರಮಗಳನ್ನು ಕೈಗೊಂಡಾಗ ಅವುಗಳನ್ನು ಬಿಂಬಿಸಿ ಸರಿ ದಾರಿಗೆ ತರುವ ಕೆಲಸವನ್ನು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್ ಪಿ ಬಳಿಗಾರ್ ಸಾಹಿತಿ ಪಿ ಬಿ ಕರಾಟೆ, ಚಂಬಣ್ಣ ಬಾಳಿಕಾಯಿ, ನ್ಯಾಯವಾದಿ ಬಾಳೇಶ್ವರ್ ಮಠ ಬಸವರಾಜ್, ಪದ್ಮರಾಜ್ ಪಾಟೀಲ್ ಮಾತನಾಡಿದರು ಅಧ್ಯಕ್ಷತೆಯನ್ನು ತಾಲೂಕ ಘಟಕದ ಅಧ್ಯಕ್ಷ ಎಂ ಎನ್ ಕಳಸಾಪುರ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕರಿಯಪ್ಪ ಶಿರಹಟ್ಟಿ ಅವರನ್ನು ಸನ್ಮಾನಿಸಲಾಯಿತು.