ಪತ್ರಿಕಾ ಭವನದಲ್ಲಿ ಅಂಬೇಡ್ಕರ್ ಜಯಂತಿ

ಸಂಜೆವಾಣಿ ವಾರ್ತೆ,
ವಿಜಯಪುರ,ಏ.15:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸ ಪತ್ರಿಕಾ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಡಾ. ಅಂಬೇಡ್ಕರ್ ಜಯಂತಿ ಅಂಗವಾಗಿ ಡಾ. ಬಾಬಾಸಾಹೇಬರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಉಪಾಧ್ಯಕ್ಷ ಪ್ರಕಾಶ ಬೆಣ್ಣೂರ, ರಾಜ್ಯ ಸಮಿತಿ ಸದಸ್ಯ ಡಿ.ಬಿ. ವಡವಡಗಿ, ಖಜಾಂಚಿ ರಾಹುಲ್ ಆಪ್ಟೆ, ಕಾರ್ಯಕಾರಿಣಿ ಸದಸ್ಯ ಬಸವರಾಜ ಉಳ್ಳಾಗಡ್ಡಿ, ಸಲಹಾ ಮಂಡಳಿಯ ಇರ್ಫಾನ ಶೇಖ ಮತ್ತಿತರರಿದ್ದರು.