ಪತ್ರಿಕಾ ಸ್ವಾತಂತ್ರ್ಯ ಎತ್ತಿಹಿಡಿಯಲು ಬದ್ಧ: ಮೋದಿ

ನವದೆಹಲಿ, ನ 16- ಪತ್ರಿಕಾ ಸ್ವಾತಂತ್ರ್ಯ ಎತ್ತಿಹಿಡಿಯಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪ್ರಯುಕ್ತ ಸಂದೇಶ ನೀಡಿರುವ ಅವರು, ಮುಕ್ತ ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ಎಲ್ಲಾ ರೀತಿಯಲ್ಲೂ ಪತ್ರಿಕಾ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಸರ್ಕಾರ ಸಂಪೂರ್ಣವಾಗಿ ಬದ್ಧರಾಗಿದ್ದೇವೆ ಎಂದರು.
125 ಕೋಟಿ ಭಾರತೀಯರ ಕೌಶಲ್ಯ, ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ಬಿಂಬಿಸಲು ಮಾಧ್ಯಮಗಳ ಸ್ಥಳಾವಕಾಶ ಬಳಕೆಯಾಗಲಿ ಎಂದು ಆಶಿಸಿದ್ದಾರೆ.
ಉಪರಾಷ್ಟ್ರಪತಿ ಪತಿ ಎಂ. ವೆಂಕಯ್ಯನಾಯ್ಡು ಟ್ವೀಟ್ ಮಾಡಿ,ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಹಾಗೂ ನಾಗರಿಕರಿಗೆ ಮಾಹಿತಿ ನೀಡುವ ಮತ್ತು ಸಬಲೀಕರಣಗೊಳಿಸುವಲ್ಲಿ ಮಾಧ್ಯಮವು ಪ್ರಮುಖ ಪಾತ್ರ ವಹಿಸುತ್ತದೆ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿರುವುದಕ್ಕಾಗಿ ಮಾಧ್ಯಮಗಳನ್ನು ಶ್ಲಾಘಿಸುತ್ತೇನೆ ಎಂದಿದ್ದಾರೆ.