ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಕ್ರೀಡಾಕೂಟ ಯಶ್ವಸಿ


ಹೊಸಪೇಟೆ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಅಂಡ್ ಕಾಮರ್ಸ್ ಕಾಲೇಜುಗಳ ಸಹಯೋಗದಲ್ಲಿ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯಿತು.
ಸೆ.22ರಿಂದ ಆರಂಭವಾದ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆ  (ಪದವಿಪೂರ್ವ) ವಿಜಯನಗರ ಜಿಲ್ಲಾ ಉಪನಿರ್ದೇಶಕ ಟಿ. ಫಾಲಾಕ್ಷ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ. ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡುವುದರ ಜೊತೆಗೆ ಶೈಕ್ಷಣಿಕವಾಗಿಯೂ ಅಭಿವೃದ್ಧಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜ್ ಹವಾಲ್ದಾರ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವುಗಳು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ವಿದ್ಯಾರ್ಥಿಗಳು ಆರೋಗ್ಯಕರ ಪೈಪೆÇೀಟಿ ನೀಡುತ್ತ  ಸ್ಪರ್ಧೆಯಲ್ಲಿ ಗೆಲುವು ಪಡೆಯುವ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಟಿಎಂಎಇಎಸ್ ಅಕಾಡೆಮಿ ಪಿಯು ಕಾಲೇಜಿನ ಪ್ರಾಂಶುಪಾಲ ಪೆÇ್ರ. ವಿ.ಎಸ್. ದಯಾನಂದ ಕುಮಾರ್ ಮಾತನಾಡಿದರು.
ವಿದ್ಯಾರ್ಥಿ ಕುಮಾರಿ ಮೀರಾ ಮತ್ತು ತಂಡ ಪ್ರಾರ್ಥಿಸಿದರು. ಡಾ. ಸಂಗಮೇಶ ಎಸ್. ಗಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಜ್ಯೋತಿ ವಂದಿಸಿದರು.
ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಸಿದ್ದರಾಮ ಜೆ, ಶ್ರೀಕಾಂತ ವಾಲ್ಕೀಕಿ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ಟಿಎಂಎಇಎಸ್ ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.