
ರಾಯಚೂರು.ಏ.೩-ಪದವಿ ವಿದ್ಯುರ್ಥಿಗಳು ೫ನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಎಲ್ಲ ವಿಷಯಗಳಲ್ಲಿ ತೇರ್ಗಡೆ ಯಾಗಿರಬೇಕೆಂಬ ಆದೇಶವನ್ನು ಹಿಂಪಡೆಯಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಜೆಶನ್ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿ ಮುಖಾಂತರ ಗುಲ್ಬರ್ಗ ವಿಶ್ವವಿದ್ಯಾಲಯ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
ಪದವಿ ವಿದ್ಯಾರ್ಥಿಗಳು ೫ನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಪ್ರಥಮ ಸೆಮಿಸ್ಟರ್ ಎಲ್ಲಾ ವಿಷಯಗಳಲ್ಲಿ ತೇರ್ಗಡೆಯಾಗಿರಬೇಕು ಎಂಬ ವಿಶ್ವವಿದ್ಯಾಲಯದ ಆದೇಶವನ್ನು ನಾವು ತೀವ್ರವಾಗಿ ಖಂಡಿಸುತ್ತೆವೆ.
ಈಗಾಗಲೇ ೫ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ತುಂಬಿರುತ್ತಾರೆ ಹಾಗೂ ವಿಜ್ಞಾನ ವಿದ್ಯಾರ್ಥಿಗಳು ಪ್ರಯೋಗಿಕ ಪರೀಕ್ಷೆಗಳನ್ನು ಮುಗಿಸಿರುತ್ತಾರೆ ಆದರೆ ವಿಶ್ವವಿದ್ಯಾಲಯವು ಏಕಾಏಕಿಯಾಗಿ ಪರೀಕ್ಷೆಗೆ ಅವಕಾಶ ನೀಡದಿರುವುದು ವಿದ್ಯಾರ್ಥಿಗಳಿಗೆ ಆಘಾತವನ್ನು ಉಂಟು ಮಾಡಿದೆ.
ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಆದೇಶದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿರುವುದಿಲ್ಲ. ಅಲ್ಲದೆ ಪರೀಕ್ಷಾ ಶುಲ್ಕ ಪಾವತಿಸಿ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿದ ಮೇಲೆ ಈ ತೀರ್ಮಾನ ಮಾಡಿರುವುದು ಪ್ರಶ್ನಾರ್ಹವಾಗಿದೆ. ಅಲ್ಲದೆ ಬೇರೆ ವಿಶ್ವವಿದ್ಯಾಲಯದಲ್ಲಿ ಈ ಆದೇಶ ಇರುವುದಿಲ್ಲ ಆದರೆ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಏಕೆ ಎಂಬ ಪ್ರಶ್ನೆ ಮೂಡಿದೆ ಆದ್ದರಿಂದ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಮತ್ತು ೫ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಹೇಶ್ ಚಿಕಲಪರ್ವಿ,ಕಾರ್ತಿಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು