ಪದವಿ ವಿದ್ಯಾರ್ಥಿನಿಯರಿಗಾಗಿ ಎರಡು ದಿನಗಳ ಸುಸ್ಥಿರ ವ್ಯಾಪಾರ, ಉದ್ಯಮಶೀಲತೆ ಕುರಿತು ಅಂತರ್ ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ:ಜ.31: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವ್ಯಾಪಾರ ವಿಭಾಗದ ವತಿಯಿಂದ ಫೆಬ್ರವರಿ 2 ಮತ್ತು 3ರಂದು ಎರಡು ದಿನಗಳ ಕಾಲ ಜಾಗತಿಕ ಪಾಲುದಾರಿಕೆಯಲ್ಲಿ ಸುಸ್ಥಿರ ವ್ಯಾಪಾರ ವಹಿವಾಟು ಮತ್ತು ಉದ್ಯಮಶೀಲತೆಯ ಅಭಿವೃದ್ಧಿಯನ್ನು ಉತ್ತೇಜಿಸುವ ಕುರಿತಾದ ಅಂತರ್ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕಿ ಹಾಗೂ ಸಹಾಯಕ ಪ್ರಾಧ್ಯಾಪಕಿ ಡಾ. ಪದ್ಮಾವತಿ ಧನ್ನಿ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ಸಂಕಿರಣಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್, ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ. ಅಜಯಸಿಂಗ್, ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಜಗದೀಶಾ ಜಿ. ಅವರು ಆಗಮಿಸುವರು ಎಂದರು.
ಅತಿಥಿಗಳಾಗಿ ವಿಭಾಗದ ಜಂಟಿ ನಿರ್ದೇಶಕ ಪ್ರಕಾಶ್ ಹೆಚ್. ಹೊಸಮನಿ, ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲಾ, ಮುಖ್ಯ ಭಾಷಣಕಾರರಾಗಿ ಮಂಡಲಾ ಸಂಸ್ಥಾಪಕಿ ಹಾಗೂ ಅಧ್ಯಕ್ಷೆ ಡಾ. ಮಂಜುಳಾ ಬಟ್ಟಲುರಿ, ದುಬೈ ಆರ್ಥಿಕ ಹಾಗೂ ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಶಿದ್ ಹಜಾರಿ, ದಿಕ್ಸೂಚಿ ಭಾಷಣಕಾರರಾಗಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯದ ಆಡಳಿತಾತ್ಮಕ ಕುಲಸಚಿವ ಡಾ. ಶಂಕರಗೌಡ ಎಸ್. ಸೋಮನಾಳ್, ಗುಲಬರ್ಗಾ ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಪ್ರೊ. ರಾಜನಾಳಕರ್ ಲಕ್ಷ್ಮಣ್, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಡಾ. ಬಸವರಾಜ್ ಪಿ. ಡೋಣೂರ್, ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಕೆ. ಪದ್ಮಶ್ರೀ, ಪಾಂಡಿಚೇರಿಯ ಹೊಟೇಲ್ ಮ್ಯಾನೇಜಮೆಂಟ್ ಹಾಗೂ ಅಡುಗೆ ತಂತ್ರಜ್ಞಾನ ಸಂಸ್ಥೆಯ ಪ್ರಿನ್ಸಿಪಾಲ್ ಪ್ರೊ. ವಿಜಯ್ ನಂಬಿ, ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಪಾಂಡುರಂಗ ವಿ., ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಪ್ರೊ. ಎಸ್.ಎಂ. ಶಿವಪ್ರಸಾದ್, ಮೈಸೂರು ಮಹಾರಾಜಾ ಕಾಲೇಜಿನ ಪ್ರೊ. ಲಾನ್ಸಿ ಡಿ, ಸೋಜಾ, ಡಾ. ಸುಶ್ಮೀತಾ ಬಿ., ಮಹಿಳಾ ವಿಶ್ವವಿದ್ಯಾಲಯದ ಡಾ. ಜಾಯ್ ಎಚ್. ಹೊಸಕೇರಿ ಅವರು ಆಗಮಿಸುವರು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಹ ಸಂಚಾಲಕ ಡಾ. ಮಲ್ಲಿಕಾರ್ಜುನ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಡಾ. ದಯಾಸಾಗರ್ ಸಾಲೋಕಿ ಅವರು ಉಪಸ್ಥಿತರಿದ್ದರು.