ಪದವೀಧರ ಮತದಾರರು ತಪ್ಪದೆ ಮತದಾನ ಮಾಡಿ:ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ

ಕಲಬುರಗಿ:ಮೇ.29: ಜೂನ್ 3 ರಂದು ಈಶಾನ್ಯ ಪದವೀಧರ ಚುನಾವಣೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ಮತದಾನ ಚಲಾಯಿಸಬೇಕೆಂದು ಪ್ರಾದೇಶಿಕ ಆಯುಕ್ತರಾದ ಕಲಬುರಗಿ ವಿಭಾಗದ ಕೃಷ್ಣಬಾಜಪೇಯಿ ಹೇಳಿದರು.
ಬುಧುವಾರದಂದು ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಭಾರತದ ಚುನಾವಣಾ ಆಯೋಗ ಪ್ರಾದೇಶಿಕ ಆಯುಕ್ತರು ಕಲಬುರಗಿ ವಿಭಾಗ ಕಲಬುರಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ ವತಿಯಿಂದ ಕರ್ನಾಟಕ ಈಶಾನ್ಯ ಪದವೀಧರ ಮತದಾರರಿಗೆ ಮತದಾನ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟಿಸಿ ಮಾತನಾಡಿದರು.
ಅಂದು ನಡೆಯುವ ಮತದಾನ ದಿನದಂದು ಮತದಾನ ಕೇಂದ್ರದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದ್ದು ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಬೇಕು ಎಂದರು
ಈಶಾನ್ಯ ಪದವೀಧರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಮಾತನಾಡಿ, ವೋಟಿಂಗ್ ಪ್ರಕ್ರಿಯೆ ಬೇರೆಯಿದೆ ಬ್ಯಾಲೆಟ್ ಪೇಪರ್‍ನಲ್ಲಿ ಮುಖಾಂತರ ನಡೆಯುತ್ತೆ ಬಹಳಷ್ಟು ವ್ಯತ್ಯಾಸವಿದೆ ನಿಮ್ಮ ಮತ ತಿರಸ್ಕತವಾಗದಂತೆ ನೋಡಿಕೊಳ್ಳಬೇಕು.
ಬ್ಯಾಲೆಟ್ ಪೇಪರ್ ಮೂಲಕ ಎಲೆಕ್ಷನ ಕಂಡಕ್ಟ್ ಆಗುತ್ತೆ. ಈ ಸಲ ಮತದಾರರು ಹೆಚ್ಚಾಗಿದ್ದು ಎಲ್ಲರು ಸೂಚನೆಗಳನ್ನು ಫಾಲೋ ಮಾಡಿ ಸರಿಯಾಗಿ ಮತದಾನ ಮಾಡಿ ಪೆÇೀಲಿಂಗ್ ಮತದಲ್ಲಿ ನಿಮ್ಮ ಮತ ಕೌಂಟ್ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ದೇವಿದಾಸ ಪಾಟೀಲ್ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ಪದವೀಧರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದ ತರಬೇತಿದಾರರಾದ ಶಶಿಶೇಖರ ರೆಡ್ಡಿ ತರಬೇತಿ ನೀಡಿದರು.
ಇದೇ ಸಂದರ್ಭದಲ್ಲಿ ಕಲಬುರಗಿ ವೃತ್ತದ ಉಪಸಂರಕ್ಷಣಾಧಿಕಾರಿ ಸುಮಿತಕುಮಾರ ಪಾಟೀಲ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅಬ್ದುಲ್ ಅಜೀಮ್, ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಮಧುಮತಿ , ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪ ಗೌಡ ಸೇರಿದಂತೆ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿನ ಮುಖ್ಯಸ್ಥರು ನೊಂದಾಯಿತ ಪದವೀಧರರು ಹಾಜರಿದ್ದರು.