ಪದೇ ಪದೇ ನೋಟುಗಳ ಅಮಾನ್ಯೀಕರಣ ಸರಿಯಲ್ಲ

ಹೊನ್ನಾಳಿ.ಮೇ.೨೬ :  ಪದೇ ಪದೇ ನೋಟುಗಳ ಅಮಾನ್ಯೀಕರಣ ಸರಿಯಲ್ಲ ಎಂದು ದಾವಣಗೆರೆ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ.ಜೆ.ಆರ್.ಷಣ್ಮುಖಪ್ಪ ಹೇಳಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಇತ್ತೀಚಿಗೆ ಎರಡು ಸಾವಿರ ರೂ ಮುಖ ಬೆಲೆಯ ನೋಟುಗಳನ್ನು ಅಮಾನ್ಯೀಕರಣ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಈ ಹಿಂದೆ ಸಾವಿರ ಮತ್ತು ಐದುನೂರು ಮುಖಬೆಲೆಯ ನೋಟು ಅಮಾನ್ಯೀಕರಣ ಮಾಡಿದ್ದು.ದೇಶದಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಅವರು ಹೇಳಿದ್ದಾರೆ. ಎರಡು ಸಾವಿರ ರೂ ಮುಖಬೆಲೆಯ ನೋಟು ರದ್ದು ಮಾಡಿರುವುದು ಸರಿ.ಆದರೆ ಇದಕ್ಕೆ ಪರ್ಯಾಯವಾಗಿ ಸಾವಿರ ರೂ ಮುಖಬೆಲೆಯ ನೋಟುಗಳನ್ನು ಸರ್ಕಾರ ಜಾರಿಗೆ ತರಬೇಕೆಂದು ಅವರು ಆಗ್ರಹಿಸಿದ್ದಾರೆ.