`ಪರಂವಃ’  ಹಾಡು ಡಾಲಿ ಬಿಡುಗಡೆ

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ  ಚಿತ್ರ “ಪರಂವಃ”.

ಸಂತೋಷ್ ಕೈದಾಳ ನಿರ್ದೇಶಿಸಿರುವ ಚಿತ್ರಕ್ಕೆ ನಾಗೇಶ್ ಕುಂದಾಪುರ,  ಶಿವರಾಜ್ ಸೇರಿ ಬರೆದಿರುವ ” ಭೂರಮೆಲಿ ಮತ್ಯಾರು” ಎಂಬ ತಂದೆ – ಮಗನ ಭಾವನಾತ್ಮಕ ಪಯಣಕ್ಕೆ ಮುನ್ನುಡಿಯಾಗಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಅಪರಾಜಿತ್ ಹಾಗೂ ಜೋಸ್ ಜೋಸ್ಸೆ ಸಂಗೀತ ನೀಡಿದ್ದಾರೆ. ಗಾಯಕ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ನಟ  ಡಾಲಿ ಧನಂಜಯ ಚಿತ್ರದ ಈ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಚಿತ್ರದ ನಾಯಕ ವೀರಗಾಸೆ ಕಲಾವಿದ. ಕುಟಂಬವೇ ವೀರಗಾಸೆ ಕುಟುಂಬ. ನಾಯಕನಿಗೆ ತಂದೆಯಂದರೆ ಪ್ರಾಣ. ತಂದೆಗೆ ಮಗನೇ ಜೀವ. ಇಂತಹ ವಿಭಿನ್ನ ಕಥಾಹಂದರ ಹೊಂದಿರುವ “ಪರಂವಃ” ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಜುಲೈನಲ್ಲಿ ಚಿತ್ರ  ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ಸಂತೋಷ್ ಕೈದಾಳ ತಿಳಿಸಿದ್ದಾರೆ.

ಎ.ಎಸ್ ಶೆಟ್ಟಿ ಛಾಯಾಗ್ರಹಣ, ಅಪರಾಜಿತ್ – ಜೋಸ್ ಜೋಸ್ಸೆ ಸಂಗೀತ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತವಿದೆ. ಪ್ರೇಮ್ ಸಿಡ್ಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು, ನಾಜರ್, ಶೃತಿ, ಮುಕುಂದ್, ಅವಿನಾಶ್, ಶಬರೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.