ಪರವಾನಗಿ ಇಲ್ಲದೆ ಪಟಾಕಿ ಅಂಗಡಿ ನಡೆಸಿದರೆ ಕ್ರಿಮಿನಲ್ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ. ಅ. 14: ಪರವಾನಗಿ ಇಲ್ಲದೆ ಪಟಾಕಿ ಅಂಗಡಿ ನಡೆಸುವಂತಿಲ್ಲ, ಜಿಲ್ಲೆಯಲ್ಲಿ ಅಂತಹ ಅಂಗಡಿಗಳು ಕಂಡು ಬಂದರೆ ಅಂಗಡಿ ಮಾಲಿಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪಠಾಕಿ ಅಂಗಡಿ ಪರವಾನಗಿಗೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಬರುವ ದೀಪಾವಳಿ ಹಬ್ಬದ ಅಂಗವಾಗಿ ಹಾಕಲಾಗುವ ತಾತ್ಕಾಲಿಕ ಪಟಾಕಿ ಮಳಿಗೆಗಳ ಮಾಲಿಕರು ಮುಂಚಿತವಾಗಿ ಸಂಬಂಧಪಟ್ಟವರಿಂದ ಪರವಾನಗಿ ಪಡೆಯಬೇಕು. ಶಾಶ್ವತವಾಗಿ ಪಟಾಕಿ ಅಂಗಡಿಗಳನ್ನು ನಡೆಸುವವರು ಕಡ್ಡಾಯವಾಗಿ ಪರವಾನಗಿ ಪಡೆದಿರಬೇಕು.. ಯಾರ ಪರವಾನಗಿ ಅವಧಿ ಮುಗಿದಿದೆಯೋ ಅವರು ಕೂಡಲೆ ಪರವಾನಗಿಯನ್ನು ನವೀಕರಿಸಬೇಕು ಎಂದರು.
ತಾತ್ಕಾಲಿಕ ಪರವಾನಗಿಗಾಗಿ ಅರ್ಜಿ ಸಲ್ಲಿಸಿದ ಅಂಗಡಿಗಳ ಸ್ಥಳಕ್ಕೆ ಪೆÇಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿ ಶಾಮಕ ದಳ ಹಾಗೂ ನಗರಸಭೆಯ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿ ಮೂರು ದಿನಗಳ ಒಳಗೆ ಎನ್‍ಓಸಿ ನೀಡಬೇಕು. ಈ ಹಿಂದಿನಿಂದ ಬೀದರ ಜಿಲ್ಲೆಯಾದ್ಯಂತ ನಡೆಸಲಾಗುತ್ತಿರುವ ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅವರ ಪರವಾನಗಿ ಪರಶೀಲಿಸಬೇಕು ಹಾಗೂ ಅವರು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿರುವ ಬಗ್ಗೆ ದೃಡಿಕರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, ಯಾರು ಕೂಡ ಪರವಾನಗಿ ಇಲ್ಲದೆ ಪಟಾಕಿ ಮಾರಾಟ ಮಾಡಬಾರದು, ಪಟಾಕಿ ಅಂಗಡಿ ಹೊರತು ಪಡಿಸಿ ಇತರೆ ಅಂಗಡಿಗಳಲ್ಲಿ ಪಟಾಕಿ ಮಾರಾಟ ಮಾಡುವುದು ಅಪರಾದವಾಗಿರುತ್ತದೆ. ಆದರಿಂದ ಯಾರು ಸಹ ಇಂತಹ ಕಡೆಗಳಲ್ಲಿ ಪಟಾಕಿ ಮಾರಾಟ ಮಾಡಬಾರದು ಎಂದು ಎಚ್ಚರಿಸಿದರು.
ಪೆÇಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಪಟಾಕಿ ಮಾರಾಟದ ಪರವಾನಗಿ ಇಲ್ಲದೆ ಇರುವುದು ಕಂಡು ಬಂದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಸ್ಥಳ ಪರಿಶೀಲನೆ ನಡೆಸದೆ ಎನ್‍ಓಸಿ ನೀಡಬಾರದು. ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ., ಬೀದರ ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ನಗರಸಭೆ ಆಯುಕ್ತ ಶಿವರಾಜ ರಾಠೋಡ, ಅಗ್ನೀ ಶಾಮಕ ಅಧಿಕಾರಿ ಸೇರಿದಂತೆ ಇತರೆ ಜಿಲ್ಲಾ ಹಾಗೂ ತಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.