ಪರಸಭೆ ದಾಳಿ ಪಿಒಪಿ ಗಣೇಶ ಮೂರ್ತಿಗಳ ವಶ

ಮಾಲೂರು ಸೆ೧೩: ಬೆಂಗಳೂರು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪುರಸಭೆ ವತಿಯಿಂದ ಗಣಪತಿ ಮೂರ್ತಿಗಳ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪಿಒಪಿ ಗಣಪತಿ ಮೂರ್ತಿಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿ ಪಿಓಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಂತ್ರಣ ಅಧಿಕಾರಿ ರಾಜು ಮಾತನಾಡಿ ಪಿಒಪಿ ಪರಿಸರಕ್ಕೆ ಮಾರಕವಾಗಿದ್ದು, ಪಿಒಪಿಯಿಂದ ತಯಾರಿಸಿದ ಗಣಪತಿ ಮೂರ್ತಿಗಳು ನೀರಿನಲ್ಲಿ ಕರಗುವುದಿಲ್ಲ, ಪರಿಸರದ ಹಿತದೃಷ್ಟಿಯಿಂದ ಪಿಒಪಿ ಗಣಪತಿ ಪೂರ್ತಿಗಳ ತಯಾರು ಮಾಡುವುದು ಹಾಗೂ ಮಾರಾಟ ಮಾಡುವುದನ್ನು ಸರ್ಕಾರ ನಿಷೇಧಿಸಿದ್ದು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪುರಸಭೆ ನಗರಸಭೆಗಳು ಆಯಾ ತಾಲೂಕುಗಳ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪಿಒಪಿ ಗಣಪತಿ ಪೂರ್ತಿಗಳ ಮಾರಾಟ ಮಾಡುವುದರಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಗಣಪತಿ ಮಾರಾಟಗಾರರು ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿದೆ. ಆದರೂ ಸಹ ಪಿಒಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡುತ್ತಿರುವುದರಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಪಿಓಪಿ ಗಣಪತಿ ಮೂರ್ತಿಗಳನ್ನು ವಶಪಡಿಸಿ ಕೊಂಡು ದಂಡ ವಿಧಿಸಿ ಪಿಒಪಿ ಗಣಪತಿ ಮೂರ್ತಿಗಳು ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಂ.ಆರ್.ಪ್ರದೀಪ್ ಕುಮಾರ್, ಪರಿಸರ ಅಭಿಯಂತರೆ ಶಾಲಿನಿ, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸ್, ಆರೋಗ್ಯ ನಿರೀಕ್ಷಕ ರಾಜಣ್ಣ, ಸಹಾಯಕ ಆರೋಗ್ಯ ನಿರೀಕ್ಷಕ ವೆಂಕಟೇಶ್, ಇನ್ನಿತರರು ಹಾಜರಿದ್ದರು.