ಪರಾರಿ ಯತ್ನ, ಅತ್ಯಾಚಾರಿಗಳಿಗೆ ಗುಂಡೇಟು

ಬೆಂಗಳೂರು,ಮೇ.೨೮-ಬಾಂಗ್ಲಾದೇಶ ಮೂಲದ ಯುವತಿಯ ಗುಪ್ತಾಂಗದೊಳಗೆ ಮದ್ಯದ ಬಾಟಲಿ ಹಾಗೂ ಕಾಲ್ಬೆರಳು ತುರುಕಿ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ನಡೆಸಿದ ಇಬ್ಬರು ದುಷ್ಟರಿಗೆ ಪೂರ್ವ ವಿಭಾಗದ ಪೊಲೀಸರು ಗುಂಡು ಹೊಡೆದು ತಕ್ಕ ಪಾಠ ಕಲಿಸಿದ್ದಾರೆ.
ಪೊಲೀಸರ ಗುಂಡು ಕಾಲುಗಳಿಗೆ ತಗುಲಿ ಗಾಯಗೊಂಡಿರುವ ಬಾಂಗ್ಲಾದೇಶ ಮೂಲದ ರಿದಯ್ ಬಾಬು(೧೯) ಹಾಗೂ ಸಾಗರ್(೨೫) ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿಪಿ ಡಾ.ಶರಣಪ್ಪ ಅವರು ತಿಳಿಸಿದ್ದಾರೆ.
ಮೃಗೀಯ ಕೃತ್ಯ ನಡೆಸಿದ ಇಬ್ಬರು ಕಾಮುಕರು ಮಹಜರು ನಡೆಸಲು ಕರೆತಂದಿದ್ದ ಪೊಲೀಸರಿಂಸ ತಪ್ಪಿಸಿಕೊಳ್ಳಲು ಹೋಗಿ ಎಸಿಪಿ ಸಕ್ರಿ ಹಾಗೂ ಮುಖ್ಯಪೇದೆ ರವಿ ಅವರ ಮೇಲೆ ಹಲ್ಲೆ ನಡೆಸಿದ್ದು ಇಬ್ಬರಿಗೂ ಚಿಕಿತ್ಸೆ ಕೊಡಿಸಲಾಗಿದೆ ಎಂದರು.
ಯುವತಿಯ ಗುಪ್ತಾಂಗದೊಳಗೆ ಮದ್ಯದ ಬಾಟಲಿ ಹಾಗೂ ಕಾಲ್ಬೆರಳು ತುರುಕಿ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಸಂಬಂಧ ಬಾಂಗ್ಲಾದೇಶದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹೈದರಾಬಾದ್‌ನ ಹಕೀಲ್ ಎಂಬುವರನ್ನು ಬಂಧಿಸಲಾಗಿತ್ತು.
ಇದಲ್ಲದೇ ರಾತ್ರಿಯಿಡೀ ಕಾರ್ಯಾಚರಣೆ ಕೈಗೊಂಡು ಕೃತ್ಯಕ್ಕೆ ಸಹಕರಿಸಿದ್ದ ರಿದಾಯ್ ಬಾಬು ಪತ್ನಿಯರಾದ ನಸ್ರತ್ ಹಾಗೂ ಕಾಜಲ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಪ್ರಕರಣದ ತನಿಖೆ ನಡೆಸುತ್ತಿರುವ ಪೂರ್ವ ವಿಭಾಗದ ಪೊಲೀಸರ ವಿಶೇಷ ತಂಡ ಇಂದು ಬೆಳಿಗ್ಗೆ ೭ರ ವೇಳೆ ಆರೋಪಿಗಳಾದ ರಿದಯ್ ಬಾಬು ಹಾಗೂ ಸಾಗರ್ ನನ್ನು ಪೊಲೀಸರು ಸ್ಥಳ ಮಹಜರಿಗೆ ಚನ್ನಸಂದ್ರ ಕನಕ ನಗರದ ಬಳಿ ಕರೆದೊಯ್ಯುತ್ತಿದ್ದಾಗ ಮಾತ್ರ ವಿಸರ್ಜನೆಯ ನೆಪಮಾಡಿ ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.
ಬೆನ್ನಟ್ಟಿ ಹಿಡಿಯಲು ಹೋದ ಎಸಿಪಿ ಸಕ್ರಿ ಹಾಗೂ ಮುಖ್ಯಪೇದೆ ರವಿ ಅವರ ಹಲ್ಲೆ ಮಾಡಿದ್ದು ಗಾಳಿಯಲ್ಲಿ ತಲಾ ಒಂದೊಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ರಾಮಮೂರ್ತಿ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಮಲ್ವಿನ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಅರವಿಂದ್ ಅವರು ಶರಣಾವಂತೆ ಎಚ್ಚರಿಕೆ ನೀಡಿದರೂ ಮತ್ತೆ ಹಲ್ಲೆಗೆ ಮುಂದಾಗಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಮತ್ತೆ ಇಬ್ಬರು ಒಂದೊಂದು ಸುತ್ತು ಗುಂಡು ಹಾರಿಸಿದ್ದು ಅವುಗಳು ಕಾಲಿಗೆ ತಗುಲಿ ಸ್ಥಳದಲ್ಲೇ ಕುಸಿದು ಬಿದ್ದಿದ್ದು ಅವರನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಆರೋಪಿಗಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಸಂಬಂಧ ಆರೋಪಿಗಳಿಗೆ ಪರಿಚಯವಿರುವವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಈಗಾಗಲೇ ಪೊಲೀಸರು ಎಫ್?ಎಸ್?ಎಲ್? ತಂಡವನ್ನು ಕರೆಯಿಸಿ ಎನ್‌ಐಐ ಕಾಲೋನಿಯಲ್ಲಿ ವಾಸವಾಗಿದ್ದ ಆರೋಪಿಗಳ ಮನೆ ಪರಿಶೀಲನೆ ಮಾಡಿದ್ದಾರೆ.
ಮನೆಯಲ್ಲಿದ್ದ ಕೆಲ ವಸ್ತುಗಳಾದ ಹಾಸಿಗೆ, ದಿಂಬು, ಮದ್ಯದ ಬಾಟಲಿಗಳು ಸೇರಿದಂತೆ ಸುಮಾರು ೧೬ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೃತ್ಯಕ್ಕೆ ಸಹಕರಿಸಿದ ಮಹಿಳೆಯರು ಸೆರೆ

ಸಂತ್ರಸ್ತ ಯುವತಿಯು, ಸಂಬಂಧಿ ಹಾಗೂ ಪರಿಚಯಸ್ಥರ ಜೊತೆ ಭಾರತಕ್ಕೆ ಬಂದಿದ್ದು . ಅವರನ್ನು ಬರಮಾಡಿಕೊಂಡಿದ್ದ ಆರೋಪಿಗಳು, ರಾಮಮೂರ್ತಿನಗರದ ಕೊಠಡಿಯೊಂದರಲ್ಲಿ ಇರಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳಲು ಅದಕ್ಕೆ ಒಪ್ಪದ ಯುವತಿ ವಾಪಸು ಊರಿಗೆ ಕಳುಹಿಸುವಂತೆ ಪಟ್ಟು ಹಿಡಿದಿದ್ದರು.
ಆರೋಪಿ ರಿದಯ್ ನ ಇಬ್ಬರು ಪತ್ನಿಯರಾದ ನಸ್ರತ್ ಹಾಗೂ ಕಾಜಲ್ ವೇಶ್ಯಾವಾಟಿಕೆಗಾಗಿ ಪುನಃ ಒತ್ತಾಯಿಸಿದ್ದಳು.ಅದಕ್ಕೂ ಯುವತಿ ಒಪ್ಪಿರಲಿಲ್ಲ. ಜೊತೆಗೆ, ಹಣದ ವಿಚಾರಕ್ಕೂ ಅವರ ನಡುವೆ ವೈಮನಸ್ಸು ಉಂಟಾಗಿತ್ತು.
ಆಕ್ರೋಶಗೊಂಡ ಮಹಿಳೆ ಹಾಗೂ ಇತರೆ ಆರೋಪಿಗಳು, ಯುವತಿಯನ್ನು ಮಂಚದ ಮೇಲೆ ಮಲಗಿಸಿ ಎಳೆದಾಡಿದ್ದರು. ಬಟ್ಟೆ ಕಳಚಿ ನಗ್ನಗೊಳಿಸಿದ್ದರು. ನಂತರ, ಗುಪ್ತಾಂಗದೊಳಗೆ ಮದ್ಯದ ಬಾಟಲಿ ಹಾಗೂ ತಮ್ಮ ಕಾಲು ಬೆರಳುಗಳನ್ನು ಹಾಕಿ ಮೃಗೀಯವಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದರು ಪ್ರಕರಣದ ಸಂಬಂಧ ಇಬ್ಬರು ಮಹಿಳೆಯರು ಸೇರಿ ೬ ಮಂದಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ಯುವತಿ ಕೇರಳದಲ್ಲಿ ಪತ್ತೆ

ನಗರದಲ್ಲಿ ನಿರ್ಭಯ ನೆನಪಿಸುವ ಗುಪ್ತಾಂಗದೊಳಗೆ ಮದ್ಯದ ಬಾಟಲಿ ಹಾಗೂ ಕಾಲ್ಬೆರಳು ತುರುಕಿ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಬಾಂಗ್ಲಾದೇಶದ ೨೩ ವರ್ಷದ ಯುವತಿಯನ್ನು ಪೂರ್ವ ವಿಭಾಗದ ಪೊಲೀಸರು ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಯುವತಿಯನ್ನು ಪೊಲೀಸರು ಕೇರಳದ ಕಲ್ಲಿಕೋಟೆಯಲ್ಲಿ ಪತ್ತೆ ಹಚ್ಚಿದ್ದು ಮಾಹಿತಿ ಸಂಗ್ರಹಿಸಲು ಕರೆತರುತ್ತಿದ್ದಾರೆ.
ಕೃತ್ಯದ ಬಳಿಕ ಸಂತ್ರಸ್ತ ಯುವತಿಯು ಕಲ್ಲಿಕೋಟೆಯ ತನ್ನ ಸ್ನೇಹಿತ ಲಕ್ಷ್ಮೀಲಾಲ್ ಮನೆಯಲ್ಲಿ ಆಶ್ರಯ ಪಡೆದಿದ್ದರು.
ಕೃತ್ಯದ ಸಂಬಂಧ ಇಬ್ಬರು ಮಹಿಳೆಯರು ಸೇರಿ ಆರು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರಿಗೆ ಸಂತ್ರಸ್ತೆ ಕೇರಳಕ್ಕೆ ತೆರಳಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಹೀಗಾಗಿ ನಗರದಿಂದ ಕೇರಳಕ್ಕೆ ತೆರಳಿದ್ದ ಇನ್ಸ್‌ಪೆಕ್ಟರ್, ಮಹಿಳಾ ಪಿಎಸ್‌ಐ ತಂಡ ಸಂತ್ರಸ್ತೆಯನ್ನು ಪತ್ತೆ ಹಚ್ಚಿ ನಗರಕ್ಕೆ ಕರೆತರುತ್ತಿದ್ದು ಆಕೆಯಿಂದ ಮಾಹಿತಿ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವೇ ಗಂಟೆಗಳಲ್ಲಿ ದುಷ್ಟರ ಸೆರೆ
ಯುವತಿಯ ಗುಪ್ತಾಂಗದೊಳಗೆ ಮದ್ಯದ ಬಾಟಲಿ ಹಾಗೂ ಕಾಲ್ಬೆರಳು ತುರುಕಿ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯವು
ಬಾಂಗ್ಲಾ ಸೇರಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ದೃಶ್ಯ ವೈರಲ್ ಆಗಿದ್ದು ಮನೆಯೊಳಗೆ ನಡೆದಿದ್ದ ಪೈಶಾಚಿಕ ಕೃತ್ಯದ ದೃಶ್ಯವನ್ನು ತಿಳಿದ ಅಸ್ಸಾಂ ರಾಜ್ಯದ ಪೊಲೀಸರು ವಿಡಿಯೋ ಮೂಲ ಕೆದಕಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು.
ಈ ಬಗ್ಗೆ ಬಾಂಗ್ಲಾ ದೇಶದ ಪೊಲೀಸರಿಗೂ ಮಾಹಿತಿ ರವಾನಿಸಿದ್ದ ಅಸ್ಸಾಂ ಪೊಲೀಸರು ಕಾಮುಕರ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಪ್ರಕಟಿಸಿದ್ದರು. ಬಳಿಕ ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆ ಮಾಡಿದ್ದ ಬಾಂಗ್ಲಾ ಪೊಲೀಸರು ಕೃತ್ಯವೆಸಗಿದ ಸ್ಥಳ ಆಧರಿಸಿ ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಕಾರ್ಯಾಚರಣೆ ಕೈಗೊಂಡ ಪೂರ್ವ ವಿಭಾಗದ ಪೊಲೀಸರು ಕೆಲವೇ ಗಂಟೆಗಳಲ್ಲಿ ದುಷ್ಟರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಅಮಾನುಷ ಕೃತ್ಯ ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಈ ಸಾಮೂಹಿಕ ಅತ್ಯಾಚಾರದ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಮಾಹಿತಿ ಪಡೆದಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದೇನೆ ಎಂದವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ಈ ಸಾಮೂಹಿಕ ಅತ್ಯಾಚಾರದ ವೀಡಿಯೊ ಉತ್ತರ ಭಾರತದಲ್ಲಿ ಹರಿದಾಡುತ್ತಿದ್ದ ಮಾಹಿತಿ ಪಡೆದ ಬೆಂಗಳೂರು ಪೊಲೀಸರು, ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದಕ್ಕೆ ನಮ್ಮ ಪೊಲೀಸರನ್ನು ಅಭಿನಂದಿಸುತ್ತೇನೆ. ಪೊಲೀಸರ ಈ ಕಾರ್ಯ ಪ್ರಶಂಸನೀಯ ಎಂದರು.
ಇಂತಹ ಘಟನೆಗಳು ನಡೆಯಬಾರದು, ಇಂತದ್ದನ್ನೆಲ್ಲ ಸಹಿಸಲು ಸಾಧ್ಯವಿಲ್ಲ. ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿ
ಕೊಳ್ಳಲಾಗುವುದು ಎಂದರು.