ಪರಿಣಿತಿ-ರಾಘವ್ ಲಿಪ್ ಲಾಕ್

ಮುಂಬೈ,ಮೇ.೧೬- ಬಾಲಿವುಡ್‌ನ ನಟಿ ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥದ ವೇಳೆ ಪರಿಣಿತಿ ಹಾಗೂ ರಾಘವ್ ಲಿಪ್ ಲಾಕ್ ಮಾಡಿಕೊಂಡಿದ್ದರು ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಈ ವಿಡಿಯೋ ನೋಡಿದ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದು, ಪರಿಣಿತಿ ಹಾಗೂ ರಾಘವ್ ಡೇಟಿಂಗ್‌ನಲ್ಲಿದ್ದರು ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.
ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಬಿಟೌನ್ ನಲ್ಲಿ ಹರಿದಾಡುತ್ತಿತ್ತು. ಇಬ್ಬರೂ ಒಟ್ಟೊಟ್ಟಿಗೆ ಓಡಾಡುತ್ತಿರುವ ವಿಷಯ ಈ ಸುದ್ದಿಗೆ ಪುಷ್ಠಿ ಕೊಟ್ಟಿತ್ತು. ಆದರೆ, ಅವರು ಈ ವಿಷಯವನ್ನು ನಿರಾಕರಿಸುತ್ತಲೇ ಬಂದಿದ್ದರು. ಇದೀಗ ಎಂಗೇಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಗಾಸಿಪ್‌ಗೆ ತೆರೆ ಎಳೆದಿದ್ದಾರೆ.
ಈ ಜೋಡಿಯ ನಿಶ್ಚಿತಾರ್ಥ ಸಮಾರಂಭದಲ್ಲಿ ರಾಜಕೀಯ ಗಣ್ಯರು, ಸಿನಿ ತಾರೆಯರು ಹಾಗೂ ಕ್ರೀಡಾಪಟುಗಳ ಭಾಗಿಯಾಗಿದ್ದರು. ಪರಿಣಿತಿ ಸಹೋದರಿ ಪ್ರಿಯಾಂಕಾ ಚೋಪ್ರಾ, ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರು ಇಡೀ ಸಮಾರಂಭದಲ್ಲಿ ಮಿಂಚಿದ್ದಾರೆ. ದೆಹಲಿಯ ಇಂಡಿಯಾ ಗೇಟ್ ಬಳಿಯ ಕಪುರ್ತಲ ಹೌಸ್ ನಲ್ಲಿ ಪರಿಣಿತಿ ಚೋಪ್ರಾ ಹಾಗೂ ರಾಘವ್ ಉಂಗುರ ಬದಲಾಯಿಸಿಕೊಂಡಿದ್ದಾರೆ.