ಪರಿಶಿಷ್ಟ ಜಾತಿಯನ್ನು ಅವಮಾನಿಸಿದ್ದವರನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟನೆ

ಸಂಜೆವಾಣಿ ವಾರ್ತೆ
ಸರಗೂರು: ಆ.26:- ನಟ ಉಪೇಂದ್ರ ಮತ್ತು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಪರಿಶಿಷ್ಟ ಜಾತಿಯನ್ನು ಅವಮಾನಿಸಿದ್ದು ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಸದಸ್ಯರುಗಳು ಬೃಹತ್ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾಕಾರರು ಉಪೇಂದ್ರ ಊರು ಇದ್ದ ಕಡೆ ಹೊಲಗೇರಿ ಎಂಬ ಪದ ಬಳಕೆ ಮಾಡಿ ಶೋಷಿತ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ ಆದಕಾರಣ ಅವರ ಮೇಲೆ ರಾಜ್ಯ ಸರ್ಕಾರ ಗಂಭೀರವಾಗಿ ಈ ಪ್ರಕರಣವನ್ನು ತೆಗೆದುಕೊಂಡು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಇವರಿಬ್ಬರ ವಿರುದ್ಧ ವಿರುದ್ಧ ನಾಮ ಫಲಕಗಳ ಮೂಲಕ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಮಾತನಾಡಿ, ಯಾವುದೇ ಒಂದು ಜಾತಿಯನ್ನು ಅವಹೇಳನ ಮಾಡುವುದು ಒಳ್ಳೆಯದಲ್ಲ. ಈ ಇಬ್ಬರು ಮುಖಂಡರು ಉದ್ದೇಶಪೂರ್ವಕವಾಗಿ ಜಾತಿ ನಿಂದನೆ ಮಾಡುವ ಮೂಲಕ ಸಂವಿಧಾನ ಹಾಗೂ ಈ ನೆಲದ ಕಾನೂನುಗಳಿಗೆ ಅಪಮಾನ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಸಂವಿಧಾನ ಮತ್ತು ಪರಿಶಿಷ್ಟ ಜಾತಿ, ಪಂಗಡಗಳ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಕ್ರಮ ಜರುಗಿಸಲಿ. ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸ ಬೇಕಾಗುತ್ತದೆ' ಎಂದರು. ಜಿಲ್ಲಾ ಉಪಪ್ರಧಾನ ಸಂಚಾಲಕ ದೊಡ್ಡಸಿದ್ದು ಮಾತನಾಡಿ,ನಟ ಉಪೇಂದ್ರ ಎಂಬ ಅವಿವೇಕಿ ಈ ಜನಾಂಗದ ಬಗ್ಗೆ ಬಹಳ ಕೀಳಾಗಿ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ತಕ್ಷಣ ಕೋರ್ಟ್ ತೀರ್ಪನ್ನು ಹಿಂಪಡೆದು ಉಪೇಂದ್ರನನ್ನು ಬಂಧಿಸಬೇಕು. ಇಲ್ಲದಿದ್ದರೆ ನಿರಂತರವಾಗಿ ಪ್ರತಿಯೊಂದು ಗ್ರಾಮದಿಂದ ವಿನೂತನ ಚಳವಳಿ ನಡೆಸಬೇಕಾಗುತ್ತದೆ’ ಎಂದರು.ಯಾವುದೇ ವ್ಯಕ್ತಿ ಬಳಸಿದರೆ ಅಂತ ವ್ಯಕ್ತಿಯ ಮೇಲೆ ಪರಿಶಿಷ್ಟ ಜಾತಿ ಹಾಗೂ ವರ್ಗದ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾನೂನು ಇದೆ. ಬೆಂಗಳೂರಿನ ಚೆನ್ನಮ್ಮ ಅಚ್ಚುಕಟ್ಟು ಪೆÇಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ದೂರು ದಾಖಲಾಗಿರುವ ಪ್ರಕರಣಕ್ಕೆ ನ್ಯಾಯಾಲಯವು ತಡೆ ನೀಡಿರುವುದು ಬಹುಸಂಖ್ಯಾತ ದಲಿತ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಾಲ್ಲೂಕು ಸಂಚಾಲಕ ಸಣ್ಣಕುಮಾರ್ ಮಾತನಾಡಿ`ನಟ ಉಪೇಂದ್ರ ದಲಿತರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ಇದು ಅವರಿಗೆ ಶೋಭೆ ತರುವಂತಹ ವಿಚಾರವಲ್ಲ. ನಟರಾಗಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವುದು, ಧಕ್ಕೆ ತರುವುದು ಸರಿಯಲ್ಲ. ಕೂಡಲೇ ಬಂಧಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಇಂದಿನ ಪ್ರತಿಭಟನೆಯಲ್ಲಿ ಬರುವಾಗ ಉಪೇಂದ್ರ ಇರುವ ಎಲ್ಲಾ ಫ್ಲೆಕ್ಸ್‍ಗಳು ಹಾಗೂ ಬೋರ್ಡ್‍ಗಳನ್ನು ಕಿತ್ತು ಹಾಕಿದ್ದೇವೆ. ಜೊತೆಗೆ ಇವರು ನಟಿಸಿರುವ ಚಿತ್ರವನ್ನು ನಮ್ಮ ಜಿಲ್ಲೆಯಲ್ಲಿ ಪ್ರದರ್ಶನವಾಗಲು ಬಿಡುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಚಲನಚಿತ್ರ ನಟ ಚೇತನ್ ಅವರು ಒಂದು ಟ್ವೀಟ್ ಮಾಡಿದಾಗ.ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತದೆ.ಎಂದು ಕೇವಲ 10 ನಿಮಿಷಗಳಲ್ಲಿ ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿತ್ತು.ಉಪೇಂದ್ರ ಹೇಳಿಕೆ ನೀಡಿ ಹಲವು ದಿನಗಳು ಕಳೆದರೂ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ ಇರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರ ತಾಲ್ಲೂಕು ಸಂಚಾಲಕ ಕೂಡಗಿ ಗೋವಿಂದರಾಜು. ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ನಂತರ ಉಪೇಂದ್ರ ಭಾವಚಿತ್ರಕ್ಕೆ ಬೆಂಕಿ ಹಾಕಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ನಂತರ ತಹಶಿಲ್ದಾರ್ ಪರಶಿವಮೂರ್ತಿ ಅವರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ತಾಲೂಕು ಸಂಘಟನ ಸರಗೂರು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ.ಅಧಿಕರ್ನಾಟಕ ಮಹಾಸಭಾ ಪ್ರಧಾನ ಕಾರ್ಯದರ್ಶಿ ಚೆನ್ನಿಪುರ ಮಲ್ಲೇಶ್.ಸಾಗರೆ ನಾಗರಾಜು.ಬಸವರಾಜು.
ಈ ಪ್ರತಿಭಟನೆಯಲ್ಲಿ ಅಧಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ,ನಾಗರಾಜು.ಸಮಿತಿಯ ಸಂಘಟನೆ ಸಂಚಾಲಕ ಹಾದನೂರುಚಂದ್ರ.ಸದಸ್ಯರು ನಾಗೇಂದ್ರ, ಮಣಿಕಂಠ ಮಠದಕಟ್ಟೆ,ಸಿಂಗಯ್ಯ,ರಂಗಯ್ಯ, ದಯಾನಂದ.ನಾರಾಯಣ್,ಮಹದೇವ, ಹಿದಾಯತ್, ವೆಂಕಟರಾಮು,ಮೂರ್ತಿ.ಅಣ್ಣಯ್ಯಸ್ವಾಮಿ, ಸಿದ್ದಪ್ಪ,ಹನು, ವಸಂತಪಾಟಿಲ್, ಮಂಜು,ಎಚ್ ಡಿ ಕೋಟೆ ತಾಲೂಕು ಸದಸ್ಯ ಮಹೇಶ್, ಚೆಲುವರಾಜು, ಶಿವಪ್ಪ, ಮುಖಂಡರಾದ ಗೋಪಾಲ್, ತಿಮ್ಮಯ್ಯ,ಮಾನವ ಹಕ್ಕು ಸಮಿತಿ ಜಿಲ್ಲಾಧ್ಯಕ್ಷ ಕುಮಾರ್, ಲಕ್ಷ್ಮಿಕಾಂತ್, ಪ್ರಕಾಶ್, ಇನ್ನಿತರ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.