ಪರಿಶಿಷ್ಟ ಜಾತಿ ಕಾಲೊನಿಗೆ ಕಲ್ಪಿಸಲಾಗುತ್ತಿರುವ ಮೂಲಭೂತ ಸೌಕರ್ಯ ಕಾಮಗಾರಿ ಪರಿಶೀಲಿಸಿಃ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ

ವಿಜಯಪುರ, ಜ1-ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಹೊಸೂರ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಕಲ್ಪಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಕಾಮಗಾರಿ ಕುರಿತಂತೆ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪಿ.ಸುನಿಲ ಕುಮಾರ ಅವರು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಈ ಗ್ರಾಮದಲ್ಲಿ ಕಲ್ಪಿಸಲಾಗುತ್ತಿರುವ ಮೂಲಭೂತ ಸೌಲಭ್ಯ ಕಾಮಗಾರಿಗಳ ಬಗ್ಗೆ ಪರಿಶೀಲಿಸಬೇಕು. ವಿಶೇಷ ಘಟಕ ಹಾಗೂ ಪ್ರಗತಿ ಕಾಲೋನಿ ಯೋಜನೆಯಡಿ ಪ್ರತ್ಯೇಕವಾಗಿ ಸೌಲಭ್ಯ ಕಲ್ಪಿಸಲು ಅವಕಾಶ ಇರುವ ಹಿನ್ನೆಲೆಯಲ್ಲಿ ಈ ಕಾಮಗಾರಿಗಳ ಯಾವ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ ಎಂಬುವುದರ ಬಗ್ಗೆಯೂ ಪರಿಶೀಲಿಸಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸರ್ಕಾರ ಕೊಡಮಾಡಿದ ಸಾಲ ಮತ್ತು ಸಹಾಯ ಧನ ಸೌಲಭ್ಯ ದೊರಕಿಸುವ ಬಗ್ಗೆ ಜಿಲ್ಲೆಯ ಸಂಬಂಧಪಟ್ಟ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ರಿಜರ್ವ ಬ್ಯಾಂಕಿನ ಮಾರ್ಗ ಸೂಚಿಗಳನ್ವಯ ಈ ಸೌಲಭ್ಯ ಕಲ್ಪಿಸಲು ವಿಫಲವಾಗುವ ಬ್ಯಾಂಕ್ ವ್ಯವಸ್ಥಾಪಕರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಎಲ್ಲ ಬ್ಯಾಂಕುಗಳಿಗೆ ಸಕಾಲಕ್ಕೆ ಮತ್ತು ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯ ತಪ್ಪದೆ ದೊರಕಿಸುವ ಬಗ್ಗೆ ಎಚ್ಚರಿಕೆ ಪತ್ರ ರವಾನಿಸುವಂತೆ ಲೀಡ್ ಬ್ಯಾಂಕ್ ಮ್ಯಾನೆಜರಗಳಿಗೆ ಸೂಚನೆ ನೀಡಿದರು.
ಸಿಂದಗಿ ತಾಲೂಕಿನ ಕೆಸರಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳುವರೆಗೆ ಟ್ಯಾಂಕರ ಮೂಲಕ ನೀರು ಸರಬರಾಜು ಮಾಡಬೇಕು ಅತಾಲಟ್ಟಿ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಬಸವನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದಲ್ಲಿನ ರೈತರ ಅನುಕೂಲಕ್ಕಾಗಿ ಟಿ,ಟಿ ಅಳವಡಿಕೆಗೆ ಸಂಬಂಧಪಟ್ಟಂತೆ, ಸಮಾಜ ಕಲ್ಯಾಣ ಉಪನಿರ್ದೇರ್ಶಕರು ಸ್ಥಳೀಯವಾಗಿ ಬೇಟಿ ನೀಡಿ ಪರಿಶೀಲನಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ನಿಡಗುಂದಿ ತಾಲೂಕಿನ ಹಾಲಿಹಾಳ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಅವಶ್ಯಕವಿರುವ ಖಾಸಗಿ ಮಾಲಿಕತ್ವದ ಜಮೀನು ಖರೀದಿಸಿಗೆ ಸಂಬಂಧಿಸಿದಂತೆ ಸಂಬಂಧಿಸಿದ ಮಾಲಿಕರನ್ನು ವಿಶ್ವಾಸಕ್ಕೆ ಮತ್ತು ಮನವರಿಕೆಗೆ ಪ್ರಯತ್ನಿಸಲಾಗುವುದು. ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತ ನವೀಕರಣಕ್ಕೆ ಸಂಬಂಧಿಸಿದಂತೆ ಯೋಜನೆ ಸಿದ್ಧವಾಗಿದ್ದು ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಅಸೃ[ಶ್ಯತೆಗೆ ಸಂಬಂಧಪಟ್ಟಂತೆ ಸಾಕ್ಷಾಧಾರಗಳಿದ್ದಲ್ಲಿ9 ತಕ್ಷಣ ಪ್ರಕರಣ ಧಾಖಲಿಸಬೇಕು ಈ ಪದ್ಧತಿ ನಿಯಂತ್ರಣಕ್ಕೆ ಆಯಾ ತಾಲೂಕು ಪಂಚಾಯತ ಮತ್ತು; ಪಿ.ಡಿ.ಒಗಳು ಕ್ರಮ ಕೈಗೊಳ್ಳುವುದರ ಜೊತೆಗೆ ಮತ್ತು ಈ ಪದ್ಧತಿ ನಿವಾರಣೆ ಕುರಿತು ಸೂಕ್ತ ಜಾಗೃತಿ ಸಹ ಮೂಡಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ ಕಾಯಿದೆ 1989 ರನ್ವಯ ದಾಖಲಾದ ಪ್ರಕರಣಗಳು, ವಿಲೇವಾರಿಯಾದ ಪ್ರಕರಣಗಳು ಹಾಗೂ ಶಿಕ್ಷೆಯಾದ ಕುರಿತಂತೆ ಕಳೆ ಮೂರು ವರ್ಷಗಳಲ್ಲಿ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸಬೇಕು ಸದ್ಯಕ್ಕೆ ನ್ಯಾಯಾಲದಲ್ಲಿ ಇರುವಂತಹ ಪ್ರಕರಣ ಮತ್ತು ಇತ್ಯರ್ಥ ಪ್ರಕರಣಗಳ ಬಗ್ಗೆಯೂ ಮಾಹಿತಿ ನೀಡಬೇಕು ಹೆಚ್ಚು ದೌರ್ಜನ್ಯ ಪ್ರಕರಣಗಳು ದಾಖಲಾಗಿರುವ ಪ್ರದೇಶಗಳಲ್ಲಿ ಕಾನೂನಿನ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ಥರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಮಟ್ಟದ ಸಮೀತಿ ಸದಸ್ಯರ ನೆರವಿನಿಂದ ನ್ಯಾಯ ದೊರಕಿಸಲು ಮತ್ತು ಅವರಲ್ಲಿ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಸದಾ ನಡೆಯಲಿ ಎಂದು ಅವರು ಸಭೆಗೆ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸ್ವಾಗತಿಸಿದರು. ಜಿ,ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಇಂಡಿ ಉಪವಿಭಾಗಾಧಿಕಾರಿ ರಾಹುಲ ಶಿಂಧೆ, ವಿಜಯಪುರ ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಜಿ.ಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಅಡಿವೆಪ್ಪ ಸಾಲಗಲ್, ಸುರೇಶ ಮಣ್ಣೂರ, ಅರವಿಂದ ಸಾಲವಾಡಗಿ, ಗಣಪತಿ ಬಾಣಿಕೋಲ, ಶಿವಾನಂದ ಪಟ್ಟೇದ, ರಾಜಶೇಖರ ಕುಚಬಾಳ, ಅಶೋಕ ಕರೆಕಲ್, ವಿನಾಯಕ ಗುಣಸಾಗರ, ಪರಶುರಾಮ ಮಾದರ, ಮನೋಹರ ಕಾಂಬಳೆ, ಮುತ್ತಣ್ಣ ಸಾಸನೂರ, ಬಸವರಾಜ ಪೂಜಾರಿ ಉಪಸ್ಥಿತರಿದ್ದರು.

Spread the love