ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶ ಯಶಸ್ವಿಗೆ ಶಿವಕುಮಾರ್ ಮನವಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ: ನಗರದಲ್ಲಿ  ಪರಿಶಿಷ್ಟ ಪಂಗಡಗಳ ನವಶಕ್ತಿ  ಸಮಾವೇಶವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು, ಎಸ್ಸಿ, ಎಸ್ಟಿ ಸೇರಿದಂತೆ ಎಲ್ಲಾ ವರ್ಗವದರು ಆಹಮಿಸಬೇಕೆಂದು  ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ಶಿವಕುಮಾರ್  ಮನವಿ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆವನೀಡಿರುವ ಅವರು, ಎಸ್ಟಿ ಹಾಗೂ ಎಸ್ಸಿ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಮೂಲಕ ನಮ್ಮ ಸರ್ಕಾರ ಇತಿಹಾಸ ಸೃಷ್ಟಿಸಿದೆ. ಮೀಸಲಾತಿ ಹೆಚ್ಚಿಸಿದ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುವ ಸದಾವಕಾಶ ನಮಗೆ ಒದಗಿ ಬಂದಿದೆ. ಮೀಸಲಾತಿ ಕಲ್ಪಿಸುವಲ್ಲಿ ಹೆಚ್ಚು ಶ್ರಮವಹಿಸಿದ ಸಚಿವರಾದ ಶ್ರಿರಾಮುಲು ಅವರ ತವರು ಜಿಲ್ಲೆಯಲ್ಲಿ ಈ ಸಮಾರಂಭವನ್ನು ಆಯೋಜಿಸಲಾಗಿದೆ.  ಸುಮಾರು ಹತ್ತು ಲಕ್ಷ ಜನರು ಸೇರುವ ನಿರೀಕ್ಷೆಯಿದೆ, ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಜನರು ಈ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು.  ಬಿಜೆಪಿ ಮಿಸಲಾತಿ ವಿರೋಧಿ ಎಂದು ಸುಳ್ಳು ಹೇಳುವ ಮೂಲಕ ಕಾಂಗ್ರೆಸ್ ಜನರಲ್ಲಿ ಗೊಂದಲ ಮೂಡಿಸಿದೆ, ನಮ್ಮ ಮುಖ್ಯಮಂತ್ರಿ ಗಳು ಎಸ್ಸಿ, ಎಸ್ಟಿ ಅವರಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕಾಂಗ್ರೆಸ್ ನವರಿಗೆ ತಕ್ಕ ಉತ್ತರ ನೀಡಿದ್ದಾರೆ. ನಮ್ಮ ಪಕ್ಷ ಎಲ್ಲಾ ವರ್ಗದವರ ಪರವಾಗಿದೆ ಎಂಬುದನ್ನು ಮುಖ್ಯಮಂತ್ರಿ ಗಳು ಸಾಬೀತು ಪಡಿಸಿದ್ದಾರೆ. ಬಿಜೆಪಿಯ ಸ್ಪಷ್ಟ ಬದ್ದತೆ, ನಿದರ್ಶನವಾಗಿದೆಂದಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಕೇವಲ ನಮ್ಮ ಸಮುದಾಯವನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಂಡಿತ್ತು. ರಾಜಕೀಯವಾಗಿ ಅಧಿಕಾರ ಅನುಭವಿಸಿ ಕೈತೊಳೆದುಕೊಂಡಿದೆ. ಆದರೇ, ನಮ್ಮ ಬಿಜೆಪಿ ಸರ್ಕಾರ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಮುಂಬರುವ 2023ರ ಚುನಾವಣೆಯಲ್ಲಿ ಬಿಜೆಪಿಯದೇ ಗೆಲುವು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.